ವಾರ್ತಾ ಇಲಾಖೆಯ “ಅಮೃತ ಮಹೋತ್ಸವ ಸ್ಮರಣ ಸಂಚಿಕೆ: ಕಲ್ಯಾಣ ಕರ್ನಾಟಕ” ಕಿರು ಹೊತ್ತಿಗೆ ಬಿಡುಗಡೆ

0
71

BP NEWS: ಬಳ್ಳಾರಿ: ಸೆಪ್ಟೆಂಬರ್.17:
ಜಿಲ್ಲಾಡಳಿತ ಮತ್ತು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಸರ್ಕಾರಿ (ಮಾಜಿ ಪುರಸಭೆ) ಪದವಿ ಪೂರ್ವ ಕಾಲೇಜು ಮೈದಾನ ಆವರಣದಲ್ಲಿ ಏರ್ಪಡಿಸಲಾದ ಕಲ್ಯಾಣ ಕರ್ನಾಟಕದ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ 371(ಜೆ) ಕಾಯ್ದೆ ಜಾರಿಗೆ ಬಂದು 10 ವರ್ಷಗಳ ಹಿನ್ನಲೆಯಲ್ಲಿ, ಕಳೆದ 10 ವರ್ಷಗಳ ಅವಧಿಯಲ್ಲಿ ಕಾಯ್ದೆ ಅನುಷ್ಠಾನದ ಪರಿಣಾಮ ಕಲ್ಯಾಣ ಕರ್ನಾಟಕ ಭಾಗದ ಪ್ರದೇಶದಲ್ಲಿ ಆಗಿರುವ ಅಭಿವೃದ್ಧಿ, ಉದ್ಯೋಗ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಆಗಿರುವ ಅನುಕೂಲತೆ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಜಾರಿಗೆ ತಂದಿರುವ “ಅಮೃತ ಮಹೋತ್ಸವ ಸ್ಮರಣ ಸಂಚಿಕೆ: ಕಲ್ಯಾಣ ಕರ್ನಾಟಕ” ಕಿರುಪುಸ್ತಕವನ್ನು ಯುವಜನ ಸಬಲೀಕರಣ, ಕ್ರೀಡಾ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಭಾನುವಾರ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಹಾನಗರ ಪಾಲಿಕೆ ಮೇಯರ್ ಡಿ.ತ್ರಿವೇಣಿ, ಉಪಮೇಯರ್ ಬಿ.ಜಾನಕಿ, ಬಳ್ಳಾರಿ ವಲಯ ಪೋಲೀಸ್ ಮಹಾನಿರೀಕ್ಷಕರಾದ ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಸೇರಿದಂತೆ ಮಹಾನಗರ ಪಾಲಿಕೆಯ ಸದಸ್ಯರು, ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಪೋಲೀಸ್ ಸಿಬ್ಬಂದಿ, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here