
ಬೆಂಗಳೂರು, ಜ.16: ಜನತಾ ಹೆಲ್ತ್ ಸೊಸೈಟಿಯ ಅಧಿಕೃತ ವೆಬ್‌ಸೈಟ್ ಹಾಗೂ ಕೈಪಿಡಿಯನ್ನು ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಗೋಪಾಲಯ್ಯ ಅವರು ಮಕರ ಸಂಕ್ರಾತಿ ದಿನವಾದ ಗುರುವಾರದಂದು ಬಿಡುಗಡೆಗೊಳಿಸಿದರು. ಸಮುದಾಯಾಧಾರಿತ ಆರೋಗ್ಯ ಸೇವೆಯನ್ನು ಕಡಿಮೆ ದರದಲ್ಲಿ ಜನರಿಗೆ ತಲುಪಿಸುವ ಉದ್ದೇಶದೊಂದಿಗೆ ಸಂಸ್ಥೆ ಮಹತ್ವ ಹೆಜ್ಜೆ ಇಟ್ಟಿದೆ.
ಕಾರ್ಯಕ್ರಮದಲ್ಲಿ ಮಾತಾಡಿದ ಶಾಸಕ ಕೆ. ಗೋಪಾಲಯ್ಯ ಅವರು, ‘ಜನಸಾಮಾನ್ಯರಿಗೆ ಕೆಡಿಮೆ ದರದಲ್ಲಿ ಆರೋಗ್ಯ ಸೇವೆ ಒದಗಿಸುವಂತದ್ದು ನಿಜಕ್ಕೂ ಶ್ಲಾಘನೀಯ ವಿಚಾರ. ಆರೋಗ್ಯ ಜಾಗೃತಿ, ಆರೋಗ್ಯ ಶಿಬಿರಗಳ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಜನತಾ ಹೆಲ್ತ್ ಸೊಸೈಟಿ ಒಂದು ಉತ್ತಮ ಹೆಜ್ಜೆ ಇಟ್ಟಿದೆ. ಈ ಸಂಸ್ಥೆಗೆ ಒಳ್ಳೆಯದಾಗಲಿ’ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರು ಹಾಗೂ ಸಲಹಾ ಮಂಡಳಿ ಸದಸ್ಯರಾದ ಡಾ. ಜಿ. ಮಂಜುನಾಥ ಗೌಡ ಸಮಾಜಮುಖಿ ಆರೋಗ್ಯ ಸೇವೆಗಳ ಮಹತ್ವದ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ಜನತಾ ಹೆಲ್ತ್ ಸೊಸೈಟಿ ಸಂಸ್ಥೆ ಅಧ್ಯಕ್ಷರಾದ ಡಾ. ನಾಗೇಂದ್ರ ಡಿ.ಎಲ್ ಹಾಗೂ ಕಾರ್ಯಕಾರಿ ಸದಸ್ಯರು ಉಪಸ್ಥಿತರಿದ್ದರು.





