ಶಿಶುಪಾಲನಾ ಕೇಂದ್ರಗಳು ಗ್ರಾಮೀಣ ಭಾಗದ ಜನರಿಗೆ ವರದಾನ: ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ

0
179

BP NEWS: ಬಳ್ಳಾರಿ: ನವೆಂಬರ್.17:
ರಾಜ್ಯ ಸರ್ಕಾರವು ಆರಂಭಿಸಿರುವ ಶಿಶುಪಾಲನಾ ಕೇಂದ್ರಗಳು ಗ್ರಾಮೀಣ ಭಾಗದ ಜನರಿಗೆ ವರದಾನವಾಗಿವೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಹೇಳಿದರು.
ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿ, ಬಳ್ಳಾರಿ ಇವರ ಸಹಯೋಗದೊಂದಿಗೆ ತಾಫಂ ಕಾರ್ಯಾಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ “ಶಿಶು ಪಾಲನ ಕೇಂದ್ರಗಳ ಮಕ್ಕಳ ಹಾರೈಕೆದಾರರಿಗೆ (ಕೇರ್‍ಟೇಕರ್ಸ್) ತರಬೇತಿಗೆ” ಚಾಲನೆ ನೀಡಿ ಅವರು ಮಾತಮಾಡಿದರು.
ಗ್ರಾಮೀಣ ಭಾಗದ ಬಡ ಕುಟುಂಬಗಳ ಮಕ್ಕಳ ಆರೈಕೆಗೆ ಸರ್ಕಾರ ಜಾರಿಗೆ ತಂದಿರುವ ಶಿಶುಪಾಲನ ಕೇಂದ್ರಗಳು ಗ್ರಾಮೀಣ ಜನರ ಪಾಲಿಗೆ ವರದಾನವಾಗಲಿದೆ. ಆದರೆ ಕೇಂದ್ರಗಳನ್ನು ನಿರ್ವಹಿಸುವವರು ಮತ್ತು ಮಕ್ಕಳನ್ನು ಆರೈಕೆ ಮಾಡುವವರು ಸೂಕ್ತ ತರಬೇತಿ ಪಡೆಯಬೇಕು ಎಂದು ಕರೆ ನೀಡಿದರು.
ಶಿಶು ಪಾಲನಾ ಕೇಂದ್ರದಲ್ಲಿ ಮಕ್ಕಳ ಆರೈಕೆದಾರರು ತಮ್ಮ ಮಕ್ಕಳಂತೆ ಇತರರ ಮಕ್ಕಳನ್ನು ಆರೈಕೆ ಮಾಡಬೇಕು. ಮನೆಯ ಮೊದಲು ಗುರು ತಾಯಿಯಾದರೆ, ಎರಡನೇ ಗುರು ಅಂಗನವಾಡಿ ಸಹಾಯಕರಾಗಿದ್ದರು. ಇದೀಗ ಎರಡನೇ ಗುರು ಶಿಶು ಪಾಲನಾ ಕೇಂದ್ರದ ಆರೈಕೆದಾರರಾಗಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಗಿರಿಜಾ ಶಂಕರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೆ.ವಿಜಯ್‍ಕುಮಾರ್, ಜಿಲ್ಲಾ ನಿರೂಪಣಾಧಿಕಾರಿ ರಾಮಕೃಷ್ಣ ನಾಯ್ಕ್.ಎಂ, ತಾಲ್ಲೂಕು ಪಂಚಾಯತ್ ಇಒ ಮಡಗಿನ ಬಸಪ್ಪ, ಜಿಲ್ಲಾ ಪಂಚಾಯತಿಯ ಸಹಾಯಕ ನಿರ್ದೇಶಕ ಬಸವರಾಜ್ ಹಿರೇಮಠ ಸೇರಿದಂತೆ ಮಹಿಳಾ ಮೇಲ್ವಿಚಾರಕೀಯರು, ತರಬೇತಿದಾರರು, ಶಿಬಿರಾರ್ಥಿಗಳು, ತಾಲ್ಲೂಕು ಐ.ಇ.ಸಿ ಸಂಯೋಜಕರು ಮತ್ತು ತಾಲ್ಲೂಕು ಪಂಚಾಯತಿ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here