ತೆಕ್ಕಲಕೋಟೆಯಲ್ಲಿ “ಜಿಲ್ಲಾ ಮಟ್ಟದ ಜನತಾ ದರ್ಶನ”; 154 ಅರ್ಜಿ ಸಲ್ಲಿಕೆ

0
97

BP NEWS: ಬಳ್ಳಾರಿ: ಡಿಸೆಂಬರ್.01:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಿರುಗುಪ್ಪ ತಾಲ್ಲೂಕು ಆಡಳಿತ ಇವರ ಆಶ್ರಯದಲ್ಲಿ ತೆಕ್ಕಲಕೋಟೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶುಕ್ರವಾರ “ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ” ನಡೆಯಿತು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಸಾರ್ವಜನಿಕರು ಯಾವುದೇ ಕುಂದುಕೊರತೆಗಳಿದ್ದಲ್ಲಿ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅರ್ಜಿ ಸಲ್ಲಿಸುವ ಮೂಲಕ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಂದ ದೂರು ನಿವಾರಣೆಗೆ ಅವಕಾಶವಿದ್ದು, ಕಾಲಮಿತಿಯಲ್ಲಿ ಸಮಸ್ಯೆ ಇತ್ಯರ್ಥ ಪಡಿಸಲಾಗುವುದು ಎಂದು ಹೇಳಿದರು.


ಜನತಾ ದರ್ಶನದ ವೇಳೆ ದಾಖಲಾದ ಕುಂದುಕೊರತೆಗಳ ಸಮಗ್ರ ಸಾರ್ವಜನಿಕ ಕುಂದುಕೊರತೆ ಪರಿಹಾರ ವ್ಯವಸ್ಥೆ (ಐಪಿಜಿಆರ್‍ಎಸ್) ತಂತ್ರಾಂಶಕ್ಕೆ ಲಾಗ್‍ಇನ್ ಮಾಡಿ, ಆಯಾ ಇಲಾಖೆಗೆ ತ್ವರಿತವಾಗಿ ತಲುಪಿಸಲಾಗುವುದು ಎಂದು ಹೇಳಿದ ಅವರು, ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳ ಕಾಲಮಿತಿಯಲ್ಲಿ ಸಮಸ್ಯೆ ಬಗೆಹರಿಸಲು ಕ್ರಮಕೈಗೊಳ್ಳಲಿದ್ದಾರೆ ಎಂದರು.
ರೈತರು ಹಿಂಗಾರು ಬೆಳೆಗೆ ಫ್ರೂಟ್ಸ್ ಐಡಿಯಲ್ಲಿ ನೊಂದಾಯಿಸಿ ವಿಮೆ ಮಾಡಿಸಿಕೊಳ್ಳಬೇಕು ಹಾಗೂ ಮತದಾರರ ಪರಿಷ್ಕøತ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮತದಾರರು ತಮ್ಮ ಹೆಸರು ಇರುವ ಬಗ್ಗೆ ಪರಿಶೀಲಿಸಿ ಖಾತ್ರಿಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಜನತಾ ದರ್ಶನದಲ್ಲಿ ಅನಧಿಕೃತ ಪಂಪ್‍ಸೆಟ್‍ಗಳಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸುತ್ತಿರುವುದರ ಕುರಿತು ರೈತರ ಅಹವಾಲು, ತೆಕ್ಕಲಕೋಟೆ ಪಟ್ಟಣದಲ್ಲಿನ ಐತಿಹಾಸಿಕ ಕೋಟೆ ಸಂರಕ್ಷಣೆಗೆ ಕುರಿತಂತೆ ಗ್ರಾಮದ ನಿವಾಸಿಗಳ ಅಹವಾಲು, ಹೆಚ್ಚುವರಿ ಬಸ್ ಕಲ್ಪಿಸುವ ಕುರಿತು ಮನವಿ ಸಲ್ಲಿಕೆಯಾದವು.


ಒಟ್ಟು 154 ಅರ್ಜಿ ಸಲ್ಲಿಕೆ:
ತೆಕ್ಕಲಕೋಟೆ ಪಟ್ಟಣದಲ್ಲಿ ನಡೆದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ, ಒಟ್ಟು 154 ಅರ್ಜಿ ಸಲ್ಲಿಕೆಯಾದವು.
ಕಂದಾಯ ಇಲಾಖೆ 32, ಭೂ ದಾಖಲೆ ನಿರ್ದೇಶಕರ ಕಚೇರಿ 1, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 7, ಗಣಿ ಮತ್ತು ಭೂ ವಿಜ್ಞಾನ 1, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ 3, ಬಳ್ಳಾರಿ ಮಹಾನಗರ ಪಾಲಿಕೆ 1,
ನಗರ ನೀರು ಸರಬರಾಜು ಮತ್ತು ನೈರ್ಮಲ್ಯ 1, ಶಿಕ್ಷಣ ಇಲಾಖೆ 6, ಜಿಲ್ಲಾ ನಗರಾಭಿವೃದ್ಧಿ ಕೋಶ 1, ತೆಕ್ಕಲಕೋಟೆ ಪಟ್ಟಣ ಪಂಚಾಯಿತಿ 54, ಸಿರುಗುಪ್ಪ ಪಟ್ಟಣ ಪಂಚಾಯಿತಿ 7, ಸಮಾಜ ಕಲ್ಯಾಣ ಇಲಾಖೆ 2, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ 2, ಕೈಮಗ್ಗ ಮತ್ತು ಜವಳಿ ಇಲಾಖೆ 1, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 5, ವಿಎಸ್‍ಕೆ ವಿಶ್ವ ವಿದ್ಯಾಲಯ ಬಳ್ಳಾರಿ 1, ಪಶು ಸಂಗೋಪನಾ ಇಲಾಖೆ 3, ಆರೋಗ್ಯ ಇಲಾಖೆ 3, ಲೋಕೋಪಯೋಗಿ ಇಲಾಖೆ 2, ನೀರಾವರಿ ನಿಗಮ ಮತ್ತು ಸಣ್ಣ ನೀರಾವರಿ 2, ಕಕ ರಸ್ತೆ ಸಾರಿಗೆ ಸಂಸ್ಥೆ 5, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 3, ಕೌಶಲ್ಯಾಭಿವೃದ್ಧಿ ಇಲಾಖೆ 1, ಕನ್ನಡ ಮತ್ತು ಸಂಸ್ಕøತಿ ಇಲಾಖೆ 4, ಕಾರ್ಮಿಕ ಇಲಾಖೆ 1, ಪ್ರವಾಸೋದ್ಯಮ ಇಲಾಖೆ 1, ಪೊಲೀಸ್ ಇಲಾಖೆ 1, ಜೆಸ್ಕಾಂ 2, ಮಾಲಿನ್ಯ ನಿಯಂತ್ರಣ ಮಂಡಳಿ 1 ಸೇರಿದಂತೆ ಒಟ್ಟು 154 ಅರ್ಜಿ ಸ್ವೀಕಾರಗೊಂಡವು.


ಕಾರ್ಯಕ್ರಮದಲ್ಲಿ ಅಹವಾಲು ಸ್ವೀಕಾರ ಮಾಡಲು ಕೌಂಟರ್ ಹಾಕಲಾಗಿತ್ತು. ಕುಡಿಯುವ ನೀರಿನ ವ್ಯವಸ್ಥೆ, ಊಟದ ವ್ಯವಸ್ಥೆ, ಆಂಬ್ಯುಲೆನ್ಸ್ ವ್ಯವಸ್ಥೆ ಹಾಗೂ ಅಗ್ನಿ ಶಾಮಕ ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು. ವಿವಿಧ ಭಾಗಗಳಿಂದ ನೂರಾರು ಜನರು ತಮ್ಮ ಅಹವಾಲು ಸಲ್ಲಿಸಲು ಆಗಮಿಸಿದ್ದರು.
ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜು ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು, ಉತ್ಸುಕರಾಗಿಯೇ ಸಾರ್ವಜನಿಕ ಅಹವಾಲು ಸ್ವೀಕಾರ ಮಾಡಿದರು. ಕೆಲ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಸ್ಪಂದಿಸಿ ಪರಿಹಾರ ನೀಡಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.


ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ವತಿಯಿಂದ ಹಸಿಕಸ ಒಣಕಸ ವಿಂಗಡಣೆ ಕಿಟ್ ಹಾಗೂ ಪ್ಲಾಸ್ಟಿಕ್ ಮುಕ್ತ ಪಟ್ಟಣಕ್ಕೆ ಬ್ಯಾಗ್ ವಿತರಣೆ, ಆಯುಷ್ಮಾನ್ ಕಾರ್ಡ್ ಹಾಗೂ ತಾಲ್ಲೂಕಿನ ರೈತರಿಗೆ ಇನಾಂ ರದ್ದತಿ ನಮೂನೆ 2 ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ್, ಸಹಾಯಕ ಆಯುಕ್ತ ಹೇಮಂತ್ ಕುಮಾರ್, ಸಿರುಗುಪ್ಪ ತಹಶೀಲ್ದಾರ್ ಎಚ್.ವಿಶ್ವನಾಥ, ತಾಲ್ಲೂಕು ಪಂಚಾಯಿತಿ ಇಒ ಪವನ್ ಕುಮಾರ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here