ಹೆಚ್.ಆರ್.ಗವಿಯಪ್ಪ ವೃತ್ತದಲ್ಲಿ ಬೃಹತ್ ಸ್ತಂಭದಲ್ಲಿ ಧ್ವಜಾರೋಹಣ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ

0
172

BP NEWS: ಬಳ್ಳಾರಿ: ಜನವರಿ.26:
75 ನೇ ಗಣರಾಜ್ಯೋತ್ಸವದ ಅಂಗವಾಗಿ ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು, ನಗರದ ಹೆಚ್.ಆರ್.ಗವಿಯಪ್ಪ ವೃತ್ತದ ಬೃಹತ್ ಧ್ವಜ ಸ್ತಂಭದಲ್ಲಿ ಶುಕ್ರವಾರ ಧ್ವಜಾರೋಹಣ ನೆರವೇರಿಸಿದರು.
ಇದಕ್ಕೂ ಮುನ್ನ ನಗರದ ಡಾ.ರಾಜ್ ಕುಮಾರ್ ಉದ್ಯಾನವನದಲ್ಲಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಹಾನಗರ ಪಾಲಿಕೆಯ ಮಹಾಪೌರರಾದ ಬಿ.ಶ್ವೇತ, ಉಪ ಮಹಾಪೌರರಾದ ಬಿ.ಜಾನಕಿ, ಬಳ್ಳಾರಿ ವಲಯ ಪೆÇಲೀಸ್ ಮಹಾನೀರಿಕ್ಷಕರಾದ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್, ಸಹಾಯಕ ಆಯುಕ್ತ ಹೇಮಂತ್ ಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಮಹಾನಗರ ಪಾಲಿಕೆಯ ಸದಸ್ಯರು, ಜನಪ್ರತಿನಿಧಿಗಳು ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here