ಶಿಡ್ಲಘಟ್ಟ‌ ಬ್ಯಾನರ್‌ ವಿವಾದ; ಕಾಂಗ್ರೆಸ್‌ ನಾಯಕ ರಾಜೀವ್‌ ಗೌಡ ಅಮಾನತು!

0
52

ಬೆಂಗಳೂರು, ಜ.23:ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರದ ಬ್ಯಾನರ್‌ ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ದೂರವಾಣಿ ಮೂಲಕ ಅಶ್ಲೀಲವಾಗಿ ನಿಂದಿಸಿ ಧಮ್ಕಿ ಹಾಕಿದ್ದ ಕಾಂಗ್ರೆಸ್‌ ನಾಯಕ ರಾಜೀವ್ ಗೌಡ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.

ಇಂದು ನಡೆದ ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಪ್ರಕರಣವನ್ನು ಕೂಲಂಕುಷವಾಗಿ ಪರಿಶೀಲಿಸಲಾಗಿದೆ. ಪ್ರಕರಣದ ಗಂಭೀರತೆ ಮನವರಿಕೆಯಾದ ಹಿನ್ನಲೆಯಲ್ಲಿ ಶಿಸ್ತುಪಾಲನಾ ಸಮಿತಿಯ ಶಿಫಾರಸ್ಸಿನ ಮೇರೆಗೆ ರಾಜೀವ್ ಗೌಡ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಕುರಿತು ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಎಂ.ಸಿ. ಸುಧಾಕರ್ ಮಾತನಾಡಿ, “ಪಕ್ಷದಿಂದ ರಾಜೀವ್‌ ಗೌಡ ಅವರಿಗೆ ಕಾರಣ ಕೇಳಿ ನೋಟಿಸ್‌ ನೀಡಲಾಗಿತ್ತು. ಆದರೆ ಅವರು ಯಾವುದೇ ಉತ್ತರ ನೀಡದ ಹಿನ್ನೆಲೆಯಲ್ಲಿ ಅಮಾನತು ಕ್ರಮ ಕೈಗೊಳ್ಳಲಾಗಿದೆ” ಎಂದು ಹೇಳಿದರು.

ಇದೇ ವೇಳೆ ಸಚಿವ ಮುನಿಯಪ್ಪ ಅವರು ಸಂಪೂರ್ಣವಾಗಿ ಅವರ ಪರ ನಿಂತಿದ್ದಾರೆ ಎನ್ನುವುದಿಲ್ಲ. ಬಹಳ ಸೌಮ್ಯ ಸ್ವಭಾವದವನಾಗಿದ್ದ ರಾಜೀವ್‌ ಗೌಡ ಇಂತಹ ಮಾತುಗಳನ್ನು ಆಡಿರುವುದು ಆಶ್ಚರ್ಯ ತಂದಿದೆ. ತಪ್ಪಾಗಿದೆ ಎಂದು ಅವರೂ ಒಪ್ಪಿಕೊಂಡಿದ್ದಾರೆ. “ನಾನು ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದೇನೆ. ಅವರನ್ನು ಇಂದಲ್ಲ ನಾಳೆ ಬಂಧಿಸಲಾಗುವುದು” ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here