ಬಳ್ಳಾರಿ ಜಿಲ್ಲೆಯಲ್ಲಿ ವಿವಿಧೆಡೆ ಮೊಹರಂ ಹಬ್ಬ ನಿಷೇಧ

0
58

Bp NEWS Karnataka: ಬಳ್ಳಾರಿ: ಜುಲೈ.06:
ಜಿಲ್ಲೆಯಾದ್ಯಾಂತ ಜುಲೈ 07 ರಿಂದ ಜುಲೈ 17 ರವರೆಗೆ ಜರುಗುವ ಮೊಹರಂ ಹಬ್ಬದ ಆಚರಣೆಯನ್ನು ಜಿಲ್ಲೆಯ ವಿವಿಧ ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಿಷೇಧಿಸಿ ಬಳ್ಳಾರಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಮೊಹರಂ ಹಬ್ಬದ ಆಚರಣೆಯ ಸಂದರ್ಭದಲ್ಲಿ ವಿವಿಧ ತಾಲ್ಲೂಕುಗಳ ಕೆಲ ಗ್ರಾಮಗಳಲ್ಲಿ ವೈಶಮ್ಯ ಇರುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಮೊಹರಂ ಆಚರಿಸುವ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯಸ್ಥೆಗೆ ಧಕ್ಕೆ ಉಂಟಾಗುವ ಬಗ್ಗೆ ವರದಿಗಳು ಇರುವುದರಿಂದ ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದ್ದು, ಪೊಲೀಸ್ ಬಂದೋಬಸ್ತ್ ಪರಿಣಾಮಕಾರಿಯಾಗಿ ಜಾರಿಗೆ ತರಲು ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35 (ಎ) (ಬಿ) (ಡಿ) (ಇ) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಿಲ್ಲಾಧಿಕಾರಿಗಳು, ಜುಲೈ 07 ರಿಂದ ಜುಲೈ 17 ರವರೆಗೆ ಆಚರಿಸಲ್ಪಡುವ ಮೊಹರಂ ಹಬ್ಬವನ್ನು ಜಿಲ್ಲೆಯ ವಿವಿಧ ತಾಲ್ಲೂಕುಗಳ ಕೆಲ ಗ್ರಾಮಗಳಲ್ಲಿ ನಿಷೇಧಿಸಲಾಗಿದೆ. ಈ ಸಂದರ್ಭದಲ್ಲಿ ಸಾರ್ವಜನಿಕವಾಗಿ ಜನರು ಗುಂಪು ಸೇರದಂತೆ ಮೆರವಣಿಗೆ ನಡೆಸದಂತೆ ಮತ್ತು ಪಂಜಾಗಳನ್ನು ಕೂಡಿಸದಂತೆ ಮೊಹರಂ ಹಬ್ಬವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಅವರು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.

*ಮೊಹರಂ ಹಬ್ಬ ನಿಷೇಧಿಸಲ್ಪಟ್ಟ ಗ್ರಾಮಗಳಿವು:*
ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ತಾಳೂರು ರಸ್ತೆಯ ಕನ್ನಡ ನಗರ ಮುಖ್ಯ ರಸ್ತೆಯ (ನ್ಯಾಯಾಧೀಶರ ವಸತಿಗೃಹ ಕಾಂಪೌಂಡ್ ಪಕ್ಕದಲ್ಲಿ) ಮಹಾನಂದಿಕೊಟ್ಟಂ ಒಳಗಡೆ.
ಸಿರುಗುಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ಕೆ.ಸೂಗೂರು, ಮುದೇನೂರು, ಹೀರೆಹಾಳ್, ನಾಡಂಗ, ಬಂಡ್ರಾಳ್, ದೇಶನೂರು, ಕೆ.ಬೆಳಗಲ್ ಗ್ರಾಮಗಳು.
ತೆಕ್ಕಲಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ತೆಕ್ಕಲಕೋಟೆ, ಹಳೇಕೋಟೆ, ಉಪ್ಪಾರಹೊಸಳ್ಳಿ, ಉಡೇಗೋಳ, ಅರಳಿಗನೂರು ಗ್ರಾಮಗಳು.
ಸಿರಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಸಿರಿಗೇರಿ, ಕೂರಿಗನೂರು, ತಾಳೂರು, ಕರೂರು ಗ್ರಾಮಗಳು. ಮೋಕಾ ಪೊಲೀಸ್ ಠಾಣೆ ವ್ಯಾಪ್ತಿಯ ವಣೇನೂರು, ಜಾಲಿಬೆಂಚಿ ಗ್ರಾಮಗಳು.

ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳಗಲ್ಲು, ಕಪ್ಪಗಲ್ಲು, ಸಂಜೀವರಾಯನಕೋಟೆ ಗ್ರಾಮಗಳು. ತೋರಣಗಲ್ಲು ಪೊಲೀಸ್ ಠಾಣೆ ವ್ಯಾಪ್ತಿಯ ಡಿ.ಅಂತಾಪುರ, ಕಂಪ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ನಂ.15-ಗೋನಾಳು ಗ್ರಾಮದಲ್ಲಿ ನಿಷೇಧಿಸಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

     *ನಿಷೇಧಿಸಲಾದ ಚಟುವಟಿಕೆಗಳು:*
ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35(ಎ)ರ ಅಡಿಯಲ್ಲಿ ಶಸ್ತ್ರ, ಬಡಿಗೆ, ಬರ್ಚಿ, ಗದೆ, ಬಂದೂಕು, ಚೂರಿ, ಕೋಲು, ಲಾಠಿ ಅಥವಾ ಶರೀರಕ್ಕೆ ಗಾಯ ಮಾಡಲು ಉಪಯೋಗಿಸಬಹುದಾದ ಯಾವುದೇ ವಸ್ತುವನ್ನು ಒಯ್ಯುವುದು. ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35(ಬಿ)ರ ಅಡಿಯಲ್ಲಿ ಯಾವುದೇ ದಾಹಕ(ನಾಶಕಾರಿ) ಪದಾರ್ಥ ಇಲ್ಲವೇ ಸ್ಪೋಟಕ ವಸ್ತು ಒಯ್ಯುವುದು. ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35(ಡಿ)ರ ಅಡಿಯಲ್ಲಿ ಯಾವುದೇ ವ್ಯಕ್ತಿಗಳ ಭಾವ ಚಿತ್ರಗಳನ್ನು ಅವಮಾನಕಾರ ರೀತಿಯಲ್ಲಿ ಪ್ರದರ್ಶಿಸಬಾರದು. ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35(ಇ)ರ ಅಡಿಯಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದನ್ನು, ಪದ ಹಾಡುವುದನ್ನು, ವಾದ್ಯ ಬಾರಿಸುವುದನ್ನು, ವ್ಯಾಖ್ಯಾನ ಕೊಡುವುದನ್ನು, ಸನ್ನೆ ಪ್ರದರ್ಶನವನ್ನು, ಆ ಆಫೀಸರರ ಅಭಿಪ್ರಾಯದಲ್ಲಿ ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಯಾವುದೇ ವಸ್ತು ಅಥವಾ ತಯಾರಿ ಪ್ರದರ್ಶನ ಅಥವಾ ಪ್ರಸಾರವನ್ನು ಪ್ರತಿಬಂದಿಸುವುದು ಹಾಗೂ ಗುಂಪುಗೂಡಿ ಮೆರವಣಿಗೆ ಮಾಡುವುದು.
ಈ ಪ್ರತಿಬಂಧಕ ಆಜ್ಞೆಗೆ ವಿರುದ್ಧವಾಗಿ ಯಾರೊಬ್ಬರು ವರ್ತಿಸಿದರೆ, ಅವರು ಯಾವುದೇ ಪೊಲೀಸ್ ಅಧಿಕಾರಿಗಳಿಂದ ಇಂತಹ ವಸುಗಳನ್ನು ವಶ ಪಡಿಸಿಕೊಳ್ಳಲು ಪಾತ್ರರಾಗುವರು ಹಾಗೂ ಈ ರೀತಿ ಪಡೆಯಲ್ಪಟ್ಟ ಪದಾರ್ಥ ಸರ್ಕಾರಕ್ಕೆ ಜಮಾ ಮಾಡಲಾಗುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here