ಬಳ್ಳಾರಿ: ಅಮೃತ ಮಹೋತ್ಸವದ ಅಂಗವಾಗಿ ಉಚಿತ ಗರ್ಭಕಂಠದ ಕ್ಯಾನ್ಸರ್ ತಪಾಸಣಾ ಶಿಬಿರ

0
35

BP NEWS Karnataka: ಬಳ್ಳಾರಿ: ಜುಲೈ.20: ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ಭಾರತದಾದ್ಯಂತ 40 ಕೇಂದ್ರಗಳನ್ನು ಹೊಂದಿದ್ದು ಸುಮಾರು 75 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು ತನ್ನ 75 ನೇ ವರ್ಷದ ಸಂಸ್ಥಾಪನಾ ದಿನಾಚರಣೆ (ಅಮೃತ ಮಹೋತ್ಸವ) ಅಂಗವಾಗಿ ಜುಲೈ 23 ರಿಂದ 31 ರವರೆಗೆ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ಉಚಿತ ಗರ್ಭಕಂಠದ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿದೆ ಎಂದು ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾದ ಬಳ್ಳಾರಿ ಶಾಖೆಯ ಅಧ್ಯಕ್ಷ ಟಿ.ಜಿ.ವಿಠ್ಠಲ್ ಸಂಸ್ಥೆಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಪ್ರಸ್ತುತ ದಿನಗಳಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ ನಿಂದ ಗರ್ಭಕಂಠದ ಕ್ಯಾನ್ಸರ್ ಅತಿ ವೇಗವಾಗಿ ಹರಡುತ್ತಿರುವುದರಿಂದ ಪ್ರತಿವರ್ಷ 1,23,000 ಮಹಿಳೆಯರಿಗೆ ಕ್ಯಾನ್ಸರ್ ಹರಡುತ್ತಿದೆ. ಇದರಲ್ಲಿ 77% ಮಹಿಳೆಯರು ಸಾವನ್ನಪ್ಪುತ್ತಿದ್ದಾರೆ. ಅಂದರೆ ಭಾರತದಲ್ಲಿ ಪ್ರತಿ 8 ನಿಮಿಷಕ್ಕೆ ಒಬ್ಬ ಮಹಿಳೆ ಗರ್ಭಕಂಠದ ಕ್ಯಾನ್ಸರ್ ನಿಂದ ಸಾವನ್ನಪ್ಪುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದರು.

ಗರ್ಭಕಂಠದ ಕ್ಯಾನ್ಸರ್ ತಪಾಸಣೆಯು ಒಂದು ವಾರಗಳ ಕಾಲ ಉಚಿತವಾಗಿದ್ದು ತಪಾಸಣೆ ಮಾಡಿಸಿಕೊಳ್ಳುವವರು 8550017521 ನಂಬರ್ ಗೆ ಕರೆ ಮಾಡಿ ನೋಂದಣಿ ಮಾಡಿಕೊಳ್ಳಬಹುದು ಅಥವಾ ಸಂಸ್ಥೆಗೆ ಭೇಟಿ ನೀಡಿ ಖುದ್ದಾಗಿ ನೋಂದಣಿ ಮಾಡಿಕೊಳ್ಳಬಹುದು ಎಂದು ತಿಳಿಸುತ್ತಾ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಈ ತಪಾಸಣೆಗೆ ಒಳಪಡಬೇಕೆಂದು ಹೇಳಿದರು. ಜೊತೆಗೆ HPV ವ್ಯಾಕ್ಸಿನ್ 2000 – 10800 ರೂಪಾಯಿಗಳ ತನಕ ಇದ್ದು, ಫ್ಯಾಮಿಲಿ ಪ್ಲಾನಿಂಗ್ ಸಂಸ್ಥೆಯು ಇದನ್ನು ಕೇವಲ 1500 ರೂಪಾಯಿಗೆ ಕೊಡುತ್ತಿದೆ ಎಂದು ಹೇಳಿದರು.

ಅಮೃತ ಮಹೋತ್ಸವದ ಅಂಗವಾಗಿ 23 ಜುಲೈ ಮಂಗಳವಾರದಂದು ವರ್ಷಪೂರ್ತಿ ಕಾರ್ಯಕ್ರಮಗಳ ಉದ್ಘಾಟನೆಯಿದ್ದು ಇದನ್ನು ಬಳ್ಳಾರಿಯ ಜಿಲ್ಲಾಧಿಕಾರಿಗಳಾದ ಶ್ರೀ ಪ್ರಶಾಂತ್ ಕುಮಾರ್ ಮಿಶ್ರಾರವರು ಉದ್ಘಾಟಿಸಲಿದ್ದಾರೆ ಹಾಗೂ ಉಚಿತ ಗರ್ಭಕಂಠದ ಕ್ಯಾನ್ಸರ್ ಶಿಬಿರದ ಚಾಲನೆಯನ್ನು ಬಳ್ಳಾರಿಯ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ಶೋಭಾರಾಣಿ.ವಿ.ಜೆ.ರವರು ನೇರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಳ್ಳಾರಿಯ ವೈದ್ಯಾಧಿಕಾರಿಗಳಾದ ಡಾ.ವೈ ರಮೇಶ್ ಬಾಬುರವರು ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾದ ರಾಷ್ಟ್ರೀಯ ಉಪಾಧ್ಯಕ್ಷರಾದ ಎಸ್.ವಿಜಯ ಸಿಂಹ, ಬಳ್ಳಾರಿ ಶಾಖೆಯ ಅಧ್ಯಕ್ಷರಾದ ಟಿ.ಜಿ. ವಿಠ್ಠಲ್, ಉಪಾಧ್ಯಕ್ಷರಾದ ಡಾ.ಚಂದನ, ಆರ್ಥಿಕ ಸಲಹೆಗಾರರಾದ ಭಾಗ್ಯ, ಸದಸ್ಯರಾದ ವಿಷ್ಣು ಹಾಗೂ ಅಹಿರಾಜ್, ಶಾಖಾ ವ್ಯವಸ್ಥಾಪಕರಾದ ಎಸ್.ವಿಜಯಲಕ್ಷ್ಮಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here