ಕಾರ್ಮಿಕ ಸಂಘಟನೆಗಳ ರಾಷ್ಟ್ರವ್ಯಾಪಿ ಮುಷ್ಕರ; ಕೇರಳದಲ್ಲಿ ಜನಜೀವನ ಅಸ್ತವ್ಯಸ್ತ!

0
4
Advertisement

ತಿರುವನಂತಪುರಂ, ಫೆ.12: ಕಾರ್ಮಿಕ ಸಂಘಟನೆಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ರಾಜ್ಯದಲ್ಲಿ ಭಾರಿ ಬೆಂಬಲ ವ್ಯಕ್ತವಾಗಿದ್ದು, ಬಹುತೇಕ ಎಲ್ಲಾ ಚಟುವಟಿಕೆಗಳು ಸ್ಥಗಿತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿವೆ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ “ಕಾರ್ಮಿಕ ವಿರೋಧಿ ಹಾಗೂ ಕಾರ್ಪೊರೇಟ್ ಪರ” ಕಾರ್ಮಿಕ ಸಂಹಿತೆಗಳ ವಿರುದ್ಧ 12 ರಾಷ್ಟ್ರೀಯ ಕಾರ್ಮಿಕ ಸಂಘಟನೆಗಳು ಪ್ರತಿಭಟಿಸಿ, ಅವುಗಳನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿವೆ.

ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂ.ಜಿ.ಎನ್.ಆರ್.ಇ.ಜಿ.ಎಸ್.) ಅನ್ನು ದುರ್ಬಲಗೊಳಿಸಿರುವ ನಿರ್ಧಾರದಿಂದ ಅಸಮಾಧಾನಗೊಂಡಿರುವ ಗ್ರಾಮೀಣ ಕಾರ್ಮಿಕರು ಮುಷ್ಕರಕ್ಕೆ ಹೆಚ್ಚಿನ ಬೆಂಬಲ ಕೊಡುತ್ತಿದ್ದಾರೆ.

ಮುಷ್ಕರದ ಪರಿಣಾಮವಾಗಿ ಸಾರಿಗೆ ವಲಯಕ್ಕೆ ತೀವ್ರವಾಗಿ ಕಾಡಿದ್ದು ಕಂಡುಬಂತು. ಸಾರ್ವಜನಿಕ ಹಾಗೂ ಖಾಸಗಿ ಬಸ್‌ಗಳ ಸಂಚಾರ ಸಂಪೂರ್ಣವಾಗಿ ನಿಂತು, ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದರು. ಆಟೋ ರಿಕ್ಷಾಗಳು ರಸ್ತೆಗಿಳಿಯಲಿಲ್ಲ. ಟ್ಯಾಕ್ಸಿ ಸೇವೆಗಳು ಮತ್ತು ಆನ್‌ಲೈನ್ ಆಹಾರ ಆರ್ಡರ್ ಹಾಗೂ ವಿತರಣೆ ಸೇವೆಗಳಿಗೂ ಅಡಚಣೆ ಉಂಟಾಗಿದೆ. ಬಹುತೇಕ ಅಂಗಡಿ ಮುಂಗಟ್ಟುಗಳು ತೆರೆಯಲಿಲ್ಲ. ಮಷ್ಕರ ಹಿನ್ನಲೆಯಲ್ಲಿ ಬಹುತೇಕ ಹೋಟೆಲ್‌ಗಳು ಮತ್ತು ಉಪಹಾರ ಗೃಹಗಳು ಮುಚ್ಚಲ್ಪಟ್ಟಿದೆ. ಹಾಗೆಯೇ ಶಾಲಾ–ಕಾಲೇಜು ಶಿಕ್ಷಕರ ಸಂಘಗಳು ಹಾಗೂ ವಿದ್ಯಾರ್ಥಿ ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ನೀಡಿದ ಪರಿಣಾಮ ಹೆಚ್ಚಿನ ಶಿಕ್ಷಣ ಸಂಸ್ಥೆಗಳು ಮುಚ್ಚಿವೆ.

Advertisement

LEAVE A REPLY

Please enter your comment!
Please enter your name here