ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಹೆಸರು ಬದಲಾವಣೆಗೆ ಮುಂದಾದ ರಾಜ್ಯ ಸರ್ಕಾರ!

0
30

ಬೆಂಗಳೂರು, ಮಾ.06: ರಾಜ್ಯದ ಅತ್ಯಂತ ಹಳೆಯ ಹಾಗೂ ಐತಿಹಾಸಿಕ ಆಸ್ಪತ್ರೆಗಳಲ್ಲಿ ಒಂದಾದ ವಿಕ್ಟೋರಿಯಾ ಆಸ್ಪತ್ರೆಯ ಮರುನಾಮಕರಣಕ್ಕೆ ರಾಜ್ಯ ಸರ್ಕಾರ ತೀರ್ಮಾನಿಸಿದೆ.

ರಾಜ್ಯ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಧಾನಿಯ ಹೆಗ್ಗುರುತಾದ ವಿಕ್ಟೋರಿಯಾ ಆಸ್ಪತ್ರೆಯ ಹೆಸರನ್ನು ಬದಲಿಸುವ ಮಹತ್ವದ ನಿರ್ಧಾರವನ್ನು ಪ್ರಕಟಿಸಿದರು. ನೂರಕ್ಕೂ ಹೆಚ್ಚು ವರ್ಷಗಳ ಇತಿಹಾಸ ಹೊಂದಿರುವ ಈ ಆಸ್ಪತ್ರೆಗೆ ಇನ್ನುಮುಂದೆ ಕರ್ನಾಟಕದ ಧೀಮಂತ ಸಮಾಜವಾದಿ ನಾಯಕ ಶಾಂತವೇರಿ ಗೋಪಾಲಗೌಡ ಅವರ ಹೆಸರನ್ನು ಇಡಲಾಗುತ್ತದೆ ಎಂದು ಅವರು ಘೋಷಿಸಿದರು.

ಈ ನಿರ್ಧಾರವು ರಾಜ್ಯದ ಸಾಮಾಜಿಕ ಹಾಗೂ ರಾಜಕೀಯ ಇತಿಹಾಸದಲ್ಲಿ ಮಹತ್ವದ ಕೊಡುಗೆ ನೀಡಿದ ನಾಯಕರನ್ನು ಸ್ಮರಿಸುವ ಉದ್ದೇಶದಿಂದ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.

LEAVE A REPLY

Please enter your comment!
Please enter your name here