ಕೇರಳದಲ್ಲಿ ಎಲ್‌ಡಿಎಫ್ ಸರ್ಕಾರದ ಅಂತ್ಯಕ್ಕೆ ಕ್ಷಣಗಣನೆ: ಮೋದಿ ಘೋಷಣೆ!

0
4
Advertisement

ಪತ್ತನಂತಿಟ್ಟ, ಏ.04: ಕೇರಳದಲ್ಲಿ ಎಲ್‌ಡಿಎಫ್ ಸರ್ಕಾರವನ್ನು ಪದಚ್ಯುತಗೊಳಿಸುವುದಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಬರಲಿದ್ದು, ಕಾರ್ಯಕರ್ತರಲ್ಲಿ ಬಲವಾದ ವಿಶ್ವಾಸ ಮೂಡಿದೆ ಎಂದು ಅವರು ಹೇಳಿದ್ದಾರೆ.

ಪತ್ತನಂತಿಟ್ಟ ಜಿಲ್ಲೆಯಲ್ಲಿ ನಡೆದ ಬಿಜೆಪಿ ನೇತೃತ್ವದ ಎನ್‌ಡಿಎ ರ್‍ಯಾಲಿಯಲ್ಲಿ ಮಾತನಾಡಿದ ಮೋದಿ, ಎಲ್‌ಡಿಎಫ್ ಆಡಳಿತಕ್ಕೆ ವಿದಾಯ ಹೇಳುವ ಮನೋಭಾವ ರಾಜ್ಯದ ಜನರಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ ಎಂದು ಹೇಳಿದರು.

ಕ್ರಿಶ್ಚಿಯನ್ ಜನಸಂಖ್ಯೆ ಹೆಚ್ಚಿರುವ ಈಶಾನ್ಯ ರಾಜ್ಯಗಳು ಹಾಗೂ ಗೋವಾದಲ್ಲಿ ಸಾಧಿಸಿರುವ ಅಭಿವೃದ್ಧಿಯಂತೆಯೇ ಕೇರಳದಲ್ಲೂ ಎನ್‌ಡಿಎ ಅಭಿವೃದ್ಧಿ ಸಾಧಿಸಲಿದೆ. ಅಗಾಧ ಸಾಮರ್ಥ್ಯ ಹೊಂದಿದ್ದರೂ ಕೇರಳವು ಅಭಿವೃದ್ಧಿಯಲ್ಲಿ ಇತರ ರಾಜ್ಯಗಳಿಗಿಂತ ಹಿಂದೆ ಉಳಿದಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರಗಳಿಗಿಂತ ಎನ್‌ಡಿಎ ಸರ್ಕಾರ ಕೇರಳದ ಅಭಿವೃದ್ಧಿಗೆ ಐದು ಪಟ್ಟು ಹೆಚ್ಚು ಅನುದಾನ ನೀಡಿದೆ ಎಂದು ಮೋದಿ ಹೇಳಿದ್ದಾರೆ.

ಕೇರಳದ ಅಭಿವೃದ್ಧಿಗೆ ಭ್ರಷ್ಟಾಚಾರ ಮತ್ತು ಕೋಮುವಾದವೇ ಪ್ರಮುಖ ಅಡೆತಡೆಗಳಾಗಿದ್ದು, ಅವುಗಳನ್ನು ನಿವಾರಿಸಲು ಎಲ್‌ಡಿಎಫ್ ಅನ್ನು ಸೋಲಿಸುವ ಅಗತ್ಯವಿದೆ ಎಂದು ಅವರು ಕರೆ ನೀಡಿದರು.

Advertisement

LEAVE A REPLY

Please enter your comment!
Please enter your name here