
ಉಡುಪಿ, ಏ. 06: ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಪೂರಕವಾದ ಶಿಕ್ಷಣ ನೀಡುವ ತ್ರಿಶಾ ಸಂಸ್ಥೆಯ ಕಾಲೇಜುಗಳಲ್ಲಿ 2026–27ನೇ ಸಾಲಿನ ದಾಖಲಾತಿ ಪ್ರಕ್ರಿಯೆ ಆರಂಭಗೊಂಡಿದೆ ಎಂದು ಸಂಸ್ಥೆ ಪ್ರಕಟಣೆ ತಿಳಿಸಿದೆ.
1998ರಲ್ಲಿ ಉಡುಪಿಯಲ್ಲಿ ಲೆಕ್ಕಪರಿಶೋಧಕ ಗೋಪಾಲಕೃಷ್ಣ ಭಟ್ ಅವರ ಮಾರ್ಗದರ್ಶನದಲ್ಲಿ ಕೇವಲ ಐದು ವಿದ್ಯಾರ್ಥಿಗಳೊಂದಿಗೆ ಆರಂಭಗೊಂಡ ತ್ರಿಶಾ ಕೋಚಿಂಗ್ ಸಂಸ್ಥೆ, ತನ್ನ ಗುಣಮಟ್ಟದ ತರಬೇತಿಯಿಂದ ರಾಷ್ಟ್ರೀಯ ಮಟ್ಟದಲ್ಲಿ ಗಮನಸೆಳೆಯಿತು. ಬಳಿಕ ಮಂಗಳೂರು ಹಾಗೂ ಬೆಂಗಳೂರಿನಲ್ಲೂ ತನ್ನ ಶಾಖೆಗಳನ್ನು ವಿಸ್ತರಿಸಿಕೊಂಡಿದೆ.
ಬಿ.ಕಾಂ. ಮತ್ತು ಬಿ.ಸಿ.ಎ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಮಂಗಳೂರು ಮತ್ತು ಉಡುಪಿ ನಗರಗಳಲ್ಲಿ ಕಾಲೇಜುಗಳನ್ನು ಸ್ಥಾಪಿಸಿರುವ ತ್ರಿಶಾ ಸಂಸ್ಥೆ, ಪ್ರಸ್ತುತ ಕರಾವಳಿ ಭಾಗದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲೊಂದು ಎಂದು ಹೆಸರಾಗುತ್ತಿದೆ. ರಾಜ್ಯದ ವಿವಿಧ ಭಾಗಗಳಿಂದ ವಿಷಯ ತಜ್ಞರನ್ನು ಆಹ್ವಾನಿಸಿ ತರಬೇತಿ ನೀಡಲಾಗುತ್ತಿದ್ದು, ಇದುವರೆಗೆ 80 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದೆ.
ವಿದ್ಯಾರ್ಥಿವೇತನ ಸೌಲಭ್ಯ
ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರತಿವರ್ಷ ವಿದ್ಯಾರ್ಥಿವೇತನ ನೀಡಲಾಗುತ್ತಿದ್ದು, ಕಳೆದ ವರ್ಷ 40 ಲಕ್ಷ ರೂ.ಗಳ ವಿದ್ಯಾರ್ಥಿವೇತನ ವಿತರಿಸಲಾಗಿದೆ. ಸೈನಿಕರು ಮತ್ತು ರೈತರ ಮಕ್ಕಳಿಗೆ ವಿಶೇಷ ವಿದ್ಯಾರ್ಥಿವೇತನವೂ ಲಭ್ಯವಿದೆ.
ವಿದ್ಯಾರ್ಥಿಗಳ ಸಾಧನೆಗಳು
ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ತರಬೇತುದಾರರಿಂದ ವಿಚಾರ ಸಂಕಿರಣಗಳನ್ನು ಆಯೋಜಿಸಲಾಗುತ್ತಿದ್ದು, ವಿದ್ಯಾರ್ಥಿಗಳು ವಿಶ್ವದತ್ತ ಮುನ್ನಡೆಯಲು ಅವಕಾಶ ಕಲ್ಪಿಸಲಾಗುತ್ತಿದೆ. ವಿವಿ ಮಟ್ಟದ ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಬಹುಮಾನ ಗಳಿಸಿದ್ದಾರೆ. ದಕ್ಷಿಣ ಭಾರತ ಮಟ್ಟದ ಚೆಸ್ ಸ್ಪರ್ಧೆ ಸೇರಿದಂತೆ ಹಲವು ಕ್ರೀಡಾಕೂಟಗಳಲ್ಲಿ ವಿದ್ಯಾರ್ಥಿಗಳು ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ್ದಾರೆ. ವಿವಿಧ ವಾಣಿಜ್ಯ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಚಾಂಪಿಯನ್‌ಶಿಪ್‌ಗಳನ್ನು ಗೆದ್ದಿದ್ದಾರೆ.
ಸಂಸ್ಥೆಯ ವಿಶೇಷತೆಗಳು
ಬಿ.ಕಾಂ., ಬಿ.ಸಿ.ಎ ಅಧ್ಯಯನದ ಜೊತೆಗೆ ಸಿಎ, ಸಿಎಸ್, ಎಂಬಿಎ ಪ್ರವೇಶ ಪರೀಕ್ಷೆಗಳು, ಬ್ಯಾಂಕಿಂಗ್ ಹಾಗೂ ಎಐ ಕೋರ್ಸ್‌ಗಳಿಗೆ ತರಬೇತಿ ನೀಡಲಾಗುತ್ತದೆ. ಉಡುಪಿಯ ಕಟಪಾಡಿ ಮತ್ತು ಮಂಗಳೂರಿನ ಕೊಟ್ಟಾರ ಚೌಕಿಯ ಸುಸಜ್ಜಿತ ಕಟ್ಟಡಗಳಲ್ಲಿ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ.
ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಮಾನವೀಯ ಮೌಲ್ಯಗಳು, ಜೀವನ ಕೌಶಲಗಳು, ಸಾಹಿತ್ಯ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡಲಾಗುತ್ತಿದೆ. ಸಾಹಿತ್ಯ ಮತ್ತು ವಾಣಿಜ್ಯ ಸಂಘಗಳು, ಎನ್‌ಎಸ್‌ಎಸ್ ಹಾಗೂ ರೆಡ್ ಕ್ರಾಸ್ ಮುಖಾಂತರ ಸರ್ವತೋಮುಖ ಅಭಿವೃದ್ಧಿಗೆ ವೇದಿಕೆ ಕಲ್ಪಿಸಲಾಗಿದೆ. ಜೊತೆಗೆ ಸುಸಜ್ಜಿತ ಗ್ರಂಥಾಲಯ, ಕಂಪ್ಯೂಟರ್ ಲ್ಯಾಬ್, ವಿಶಾಲ ಆಟದ ಮೈದಾನ, ವಸತಿ ಮತ್ತು ವಾಹನ ಸೌಲಭ್ಯಗಳು ಲಭ್ಯವಿವೆ.
ಕರಾವಳಿ ಭಾಗದಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಿರುವ ತ್ರಿಶಾ ಸಂಸ್ಥೆ, ಡೇ ಮತ್ತು ಇವ್ನಿಂಗ್ ಕಾಲೇಜುಗಳ ಮೂಲಕ ರೀಜನಲ್ ಯುವ ಸಮಾವೇಶ, ಸ್ವಚ್ಛತಾ ಅಭಿಯಾನ, ಕನ್ನಡ ಮಾಧ್ಯಮ ಶಾಲೆಗಳ ದತ್ತು ಸ್ವೀಕಾರ, ರಕ್ತದಾನ ಶಿಬಿರಗಳಂತಹ ಸಮಾಜಮುಖಿ ಚಟುವಟಿಕೆಗಳನ್ನೂ ನಡೆಸುತ್ತಿದೆ.
ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ನೇರವಾಗಿ ಸಂಸ್ಥೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.





