ತಮಿಳುನಾಡಿನಲ್ಲಿ ಗೋಹತ್ಯೆ ನಿಷೇಧ; ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ!

0
3

ಚೆನ್ನೈ, ಮೇ 29: ತಮಿಳುನಾಡು ರಾಜ್ಯದಲ್ಲಿ ಗೋಹತ್ಯೆಯನ್ನು ತಕ್ಷಣ ನಿಷೇಧಿಸುವಂತೆ ಮದ್ರಾಸ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. 1976ರಲ್ಲಿ ಹೊರಡಿಸಲಾಗಿದ್ದ ಸರ್ಕಾರಿ ಆದೇಶವನ್ನು ಜಾರಿಗೆ ತಂದು ರಾಜ್ಯದಾದ್ಯಂತ ಗೋಹತ್ಯೆ ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಾಲಯ ಸೂಚಿಸಿದೆ.

ಬುಧವಾರ ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜಿ.ಆರ್. ಸ್ವಾಮಿನಾಥನ್ ಹಾಗೂ ವಿ. ಲಕ್ಷ್ಮೀನಾರಾಯಣನ್ ಅವರಿದ್ದ ರಜೆಕಾಲದ ಪೀಠ ಈ ಆದೇಶ ಹೊರಡಿಸಿದೆ.

ರಾಜ್ಯದ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ನಿರ್ದೇಶನ ನೀಡಿರುವ ನ್ಯಾಯಾಲಯ, ತಮಿಳುನಾಡಿನ ಯಾವುದೇ ಭಾಗದಲ್ಲಿ ಗೋವು ಮತ್ತು ಕರುಗಳ ಹತ್ಯೆ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಹೇಳಿದೆ.
ಬಕ್ರೀದ್ ಹಬ್ಬದ ಹಿಂದಿನ ದಿನವಾದ ಮೇ 28ರಂದು ಮಾತ್ರವಲ್ಲ, ಮುಂದಿನ ದಿನಗಳಲ್ಲಿಯೂ ರಾಜ್ಯದ ಯಾವುದೇ ಭಾಗದಲ್ಲಿ ಗೋಹತ್ಯೆ ನಡೆಯದಂತೆ ನೋಡಿಕೊಳ್ಳಬೇಕು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಹಾಲು ಉತ್ಪಾದನೆ ಹೆಚ್ಚಿಸುವುದು ಹಾಗೂ ಗ್ರಾಮೀಣ ಆರ್ಥಿಕತೆಯ ಅಭಿವೃದ್ಧಿಯ ಉದ್ದೇಶದಿಂದ 1976ರ ಆಗಸ್ಟ್‌ 30ರಂದು ಹೊರಡಿಸಿದ್ದ ಸರ್ಕಾರಿ ಆದೇಶವನ್ನು ಜಾರಿಗೆ ತರಬೇಕೆಂದು ನ್ಯಾಯಾಲಯ ತಿಳಿಸಿದೆ.

LEAVE A REPLY

Please enter your comment!
Please enter your name here