ಪಂಜಿಕಲ್ಲು, ಆ.09: ಕೇರಳ–ಕರ್ನಾಟಕ ಗಡಿಭಾಗದ ಪಂಜಿಕಲ್ಲು–ದೇಲಂಪಾಡಿ ರಸ್ತೆಯಲ್ಲಿ ಭಾರಿ ಮಳೆಯಿಂದಾಗಿ ಮರ ಬಿದ್ದು ಕೆಲಕಾಲ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಯಿತು.
ಮರ ಬಿದ್ದ ಪರಿಣಾಮ ರಸ್ತೆ ಬಂದ್ ಆಗಿದ್ದು, ವಾಹನ ಸಂಚಾರ ಸ್ಥಗಿತಗೊಂಡಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ತಕ್ಷಣ ಕಾರ್ಯಪ್ರವೃತ್ತರಾಗಿ ಜೆಸಿಬಿ ಮೂಲಕ ರಸ್ತೆಗೆ ಬಿದ್ದಿದ್ದ ಮರವನ್ನು ತೆರವುಗೊಳಿಸಿದರು.

ಸ್ಥಳೀಯರ ತ್ವರಿತ ಕಾರ್ಯಾಚರಣೆಯಿಂದ ರಸ್ತೆ ಸಂಚಾರಕ್ಕೆ ಮುಕ್ತವಾಗಿದ್ದು, ವಾಹನಗಳ ಸಂಚಾರ ಪುನರಾರಂಭಗೊಂಡಿತು.




