ಕಿಚ್ಚ ಸುದೀಪ್ ತಾಯಿ ಸರೋಜಾ ಸಂಜೀವ್ ಇನ್ನಿಲ್ಲ: ಕಿಚ್ಚನಿಗೆ ಮಾತೃ ವಿಯೋಗ

0
37
Oplus_131072

BP NEWS Karnataka: ಬೆಂಗಳೂರು: ಅಕ್ಟೋಬರ್.20:  ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ಸರೋಜಾ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ನಿಧನರಾಗಿದ್ದಾರೆ. ಸರೋಜಾ ಅವರ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್ ಅವ​ರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ. ಇಂದು ಸಂಜೆ ಅಂತ್ಯ ಕ್ರಿಯೆ ನಡೆಯಲಿದೆ. ಸರೋಜಾ ಅವರಿಗೆ ಸುದೀಪ್ ಸೇರಿದಂತೆ ಮೂವರು ಮಕ್ಕಳನ್ನು ಅಗಲಿದ್ದಾರೆ.