ಕೃಷ್ಣ ನಗರದಲ್ಲಿ ವಿದ್ಯಾರ್ಥಿ ನಿಲಯ ಉದ್ಘಾಟನೆ: ಶಾಸಕ ಬಿ.ಎಮ್ ನಾಗರಾಜ್

0
21

Bp News Karnataka, ಸಿರುಗುಪ್ಪ, Dec.05.2024:

    ಕೃಷ್ಣ ನಗರದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಶೇಷ ಅಭಿವೃದ್ಧಿ ಯೋಜನೆ ಅಡಿಯಲ್ಲಿ ರೂ.3.26 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯವನ್ನು ಶಾಸಕ ಬಿ.ಎಮ್ ನಾಗರಾಜ್ ಉದ್ಘಾಟಿಸಿದರು.   

 

 

   ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ರೇಣುಕಮ್ಮ, ಹಿಂದುಳಿದ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಎಂ.ಕೆ. ಜಲಾಲಪ್ಪ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ, ಜಿಲ್ಲಾ ಪರಿಶಿಷ್ಟ ವರ್ಗಗಳ ಇಲಾಖೆ ಉಪ ನಿರ್ದೇಶಕ ಕೆ. ದಿವಾಕರ್, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ರಾಘವೇಂದ್ರ ವರ್ಮಾ, ತಾಲೂಕು ಹಿಂದುಳಿದ ಕಲ್ಯಾಣಾಧಿಕಾರಿ ಗಾದಿಲಿಂಗಪ್ಪ, ಸಮಾ ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಸಿದ್ದಯ್ಯ, ಮುಖಂಡರಾದ ಕರಿಬಸಪ್ಪ, ನಾಗರಾಜ್ ನಿಯಮ ಪಾಲಕರಾದ ಶಾಂತಮ್ಮ, ಸಿಬ್ಬಂದಿ ವರ್ಗದವರು ಹಾಗು ವಿದ್ಯಾರ್ಥಿಗಳು ಹಾಜರಾಗಿದ್ದರು