ಬಳ್ಳಾರಿ ಬ್ಯಾನರ್‌ ಗಲಾಟೆ ಪ್ರಕರಣ; ಮೃತ ರಾಜಶೇಖರ್‌ ಕುಂಟುಂಬಕ್ಕೆ 25 ಲಕ್ಷ ಪರಿಹಾರ!

0
21
Advertisement

ಬಳ್ಳಾರಿ, ಜ.03:ಬ್ಯಾನರ್ ಕಟ್ಟುವ ವಿಚಾರವಾಗಿ ಬಳ್ಳಾರಿಯಲ್ಲಿ ನಡೆದ ಗಲಾಟೆ ವೇಳೆ ಗುಂಡು ತಗುಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಅವರ ಕುಟುಂಬಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ₹25 ಲಕ್ಷ ಪರಿಹಾರ ನೀಡಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಜಮೀರ್ ಅಹ್ಮದ್ ಖಾನ್ ಅವರು ಬಳ್ಳಾರಿಯ ಹುಸೇನ್ ನಗರದಲ್ಲಿರುವ ಮೃತ ರಾಜಶೇಖರ್ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ದುರ್ಘಟನೆಯಿಂದ ತೀವ್ರ ಆಘಾತಕ್ಕೊಳಗಾದ ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವರು, ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷ ಸದಾ ನಿಮ್ಮ ಜೊತೆಯಲ್ಲಿರಲಿದೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮೃತರ ಕುಟುಂಬಕ್ಕೆ ತಕ್ಷಣದ ನೆರವಿನ ರೂಪವಾಗಿ ₹25 ಲಕ್ಷ ಪರಿಹಾರವನ್ನು ನೀಡಲಾಗುವುದಾಗಿ ಘೋಷಿಸಿದರು. ಜೊತೆಗೆ ರಾಜಶೇಖರ್ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡಲಾಗುವುದು ಎಂದೂ ತಿಳಿಸಿದರು. ಪಕ್ಷದ ವತಿಯಿಂದಲೂ ಅಗತ್ಯ ನೆರವು ಒದಗಿಸಲಾಗುವುದು ಎಂದು ಭರವಸೆ ನೀಡಿದರು.

Advertisement

LEAVE A REPLY

Please enter your comment!
Please enter your name here