ಬಳ್ಳಾರಿ:ಬ್ಯಾನರ್ ಗಲಾಟೆ ಪ್ರಕರಣ; ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಎಫ್‌ಐಆರ್!

0
27
Advertisement

ಬಳ್ಳಾರಿ, ಜ.03: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ಆರಂಭವಾದ ಗಲಾಟೆ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದ್ದು, ಶಾಸಕ ಭರತ್‌ ರೆಡ್ಡಿ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಗಲಭೆಯಲ್ಲಿ ಗುಂಡು ತಗುಲಿ ಸಾವಿಗೀಡಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ. ಈ ಸಂಬಂಧ ನಿನ್ನೆ ಶಾಸಕ ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿ 11 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದ್ದರೆ, ಇದೀಗ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧವೂ ಎಫ್‌ಐಆರ್ ದಾಖಲಿಸಲಾಗಿದೆ.

ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಶಾಸಕ ಭರತ್ ರೆಡ್ಡಿಯ ಆಪ್ತ ಸತೀಶ್ ರೆಡ್ಡಿ, ಚಾನಾಳ್ ಶೇಖರ್, ನಾರಾ ಪ್ರತಾಪ್ ರೆಡ್ಡಿ, ನಾರಾ ಸೂರ್ಯನಾರಾಯಣರೆಡ್ಡಿ ಸೇರಿದಂತೆ ಹಲವು ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಶಾಸಕ ಜನಾರ್ದನ ರೆಡ್ಡಿ ಹಾಗೂ ಬಿಜೆಪಿ ಕಾರ್ಯಕರ್ತ ನಾಗರಾಜ್ ನೀಡಿದ ದೂರಿನ ಆಧಾರದಲ್ಲಿ ಈ ಎಫ್‌ಐಆರ್ ದಾಖಲಾಗಿದೆ. ನಿನ್ನೆ ಸಂಜೆ ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ದೂರು ಸಲ್ಲಿಸಲಾಗಿತ್ತು. ಶಾಸಕ ಜನಾರ್ದನ ರೆಡ್ಡಿ ಹಲ್ಲೆ ಹಾಗೂ ಕೊಲೆ ಯತ್ನ ಆರೋಪದಡಿ ದೂರು ನೀಡಿದ್ದರೆ, ಬಿಜೆಪಿ ಕಾರ್ಯಕರ್ತ ನಾಗರಾಜ್ ಅಕ್ರಮ ಪ್ರವೇಶ, ಜಾತಿ ನಿಂದನೆ, ಕೊಲೆ ಯತ್ನ ಹಾಗೂ ಗಲಾಟೆ ಆರೋಪಗಳನ್ನು ಉಲ್ಲೇಖಿಸಿ ದೂರು ನೀಡಿದ್ದಾರೆ. ದೂರು ಸಲ್ಲಿಸುವ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಹ ಉಪಸ್ಥಿತರಿದ್ದರು.

ಎಎಸ್‌ಪಿ ರವಿಕುಮಾರ್ ದೂರುಗಳನ್ನು ಸ್ವೀಕರಿಸಿ ಎಫ್‌ಐಆರ್ ದಾಖಲಿಸಿಕೊಂಡಿದ್ದು, ಪ್ರಕರಣದ ಎಲ್ಲಾ ಆಯಾಮಗಳ ಕುರಿತು ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Advertisement

LEAVE A REPLY

Please enter your comment!
Please enter your name here