16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ; ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ!

0
40

ಬೆಂಗಳೂರು, ಮಾ.06: ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳ ಬಳಕೆ ಅವರ ಶಿಕ್ಷಣ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನಲೆಯಲ್ಲಿ, 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ರಾಜ್ಯ ಸರ್ಕಾರ ನಿಷೇಧಿಸಲು ನಿರ್ಧರಿಸಿದೆ.

ಮಕ್ಕಳಲ್ಲಿ ಉಂಟಾಗುತ್ತಿರುವ ಅಡ್ಡಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ. ಜೊತೆಗೆ ವಿದ್ಯಾರ್ಥಿಗಳಲ್ಲಿ ಒತ್ತಡವನ್ನು ಕಡಿಮೆ ಮಾಡಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು ರಾಜ್ಯದ 204 ಬಿ.ಆರ್.ಸಿ ಕೇಂದ್ರಗಳಲ್ಲಿ ಒಬ್ಬ ಅರ್ಹ ಮಾನಸಿಕ ಆರೋಗ್ಯ ಸಲಹೆಗಾರರನ್ನು ನೇಮಕ ಮಾಡುವುದಾಗಿ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದೆ.

ಈ ಕ್ರಮವು ವಿದ್ಯಾರ್ಥಿಗಳ ಮನೋಸ್ಥಿತಿ ಸುಧಾರಣೆಗೆ ಸಹಕಾರಿ ಆಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

LEAVE A REPLY

Please enter your comment!
Please enter your name here