ಬೆಂಗಳೂರು: ಎಸ್‌.ಎಲ್‌. ಭೈರಪ್ಪ ಸಾಹಿತ್ಯ ಪ್ರತಿಷ್ಠಾನ ಪ್ರಶಸ್ತಿಗೆ ಪ್ರಕಾಶ್ ಬೆಳವಾಡಿ ಆಯ್ಕೆ

0
5
Advertisement

ಬೆಂಗಳೂರು, ಫೆ.21: ಎಸ್‌.ಎಲ್‌. ಭೈರಪ್ಪ ಸಾಹಿತ್ಯ ಪ್ರತಿಷ್ಠಾನದಿಂದ ನೀಡಲಾಗುವ 2026ನೇ ಸಾಲಿನ ಎಸ್‌.ಎಲ್‌. ಭೈರಪ್ಪ ಸಾಹಿತ್ಯ ಪ್ರತಿಷ್ಠಾನ ಪ್ರಶಸ್ತಿಗೆ ಖ್ಯಾತ ರಂಗಕರ್ಮಿ, ನಟ, ನಿರ್ದೇಶಕ ಹಾಗೂ ಬರಹಗಾರರಾದ ಶ್ರೀ ಪ್ರಕಾಶ್ ಬೆಳವಾಡಿ ಆಯ್ಕೆಯಾಗಿದ್ದಾರೆ.

ರಂಗಭೂಮಿ, ಚಲನಚಿತ್ರ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಅವರು ತೋರಿದ ಬಹುಮುಖ ಪ್ರತಿಭೆ ಹಾಗೂ ದೀರ್ಘಕಾಲದ ಸೃಜನಾತ್ಮಕ ಸೇವೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ. ಕನ್ನಡ ಸಂಸ್ಕೃತಿ ಮತ್ತು ಕಲೆಯ ಬೆಳವಣಿಗೆಯಲ್ಲಿ ಪ್ರಕಾಶ್ ಬೆಳವಾಡಿ ಅವರ ಕೊಡುಗೆ ಮಹತ್ವದ್ದಾಗಿದ್ದು, ಅವರ ಕಾರ್ಯಚಟುವಟಿಕೆಗಳು ಸದಾ ಸ್ಮರಣೀಯವಾಗಿವೆ ಎಂದು ಪ್ರತಿಷ್ಠಾನ ತಿಳಿಸಿದೆ.

ಈ ಗೌರವಕ್ಕೆ ಆಯ್ಕೆಯಾಗಿರುವ ಪ್ರಕಾಶ್ ಬೆಳವಾಡಿ ಅವರಿಗೆ ವಿವಿಧ ಸಾಹಿತ್ಯ, ಸಾಂಸ್ಕೃತಿಕ ವಲಯಗಳಿಂದ ಹೃತ್ಪೂರ್ವಕ ಅಭಿನಂದನೆಗಳು ವ್ಯಕ್ತವಾಗಿವೆ.

Advertisement

LEAVE A REPLY

Please enter your comment!
Please enter your name here