Advertisement 

ಮುಂಬೈ, ನ.24: ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಬಾಲಿವುಡ್ ನ ಹಿರಿಯ ನಟ ಧರ್ಮೇಂದ್ರ ನಿಧನರಾಗಿದ್ದಾರೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ನಂತರ ಮನೆಯಲ್ಲಿಯೇ ಅವರಿಗೆ ಚಿಕಿತ್ಸೆ ಕೊಡಲಾಗುತ್ತಿತ್ತು. ಆದರೆ ಇವತ್ತು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.
ಧರ್ಮೇಂದ್ರ ಅವರ ಮೃತದೇಹವನ್ನು ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕಿಡದೆ ಖಾಸಗಿಯಾಗಿಯೇ ವಿಧಿವಿಧಾನಗಳನ್ನು ಮಾಡಲಾಯಿತು ಎಂದು ಮೂಲಗಳು ತಿಳಿಸಿವೆ.
ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಧರ್ಮೇಂದ್ರ ಅವರ ಕೊನೆಯ ಚಿತ್ರ ʼಇಕ್ಕೀಸ್ʼ ಡಿಸೆಂಬರ್ 25 ರಂದು ಬಿಡುಗಡೆಯಾಗಲಿದೆ. ಧರ್ಮೇಂದ್ರ ಅವರಿಗೆ 2012ರಲ್ಲಿ ಭಾರತ ಸರಕಾರ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು.
Advertisement 





