ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಘಟಕಕ್ಕೆ ಚಾನಳ್ ಶೇಖರ್ ನೇಮಕ

0
4

ರಾಜ್ಯ ಕಾರ್ಯಕಾರಿ ಸಮಿತಿಯ ವಿಶೇಷ ಆಹ್ವಾನಿತ ಸದಸ್ಯರಾಗಿ ಜವಾಬ್ದಾರಿ

ಬಳ್ಳಾರಿ, ಸೆ.25: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕರ್ನಾಟಕ ರಾಜ್ಯ ಘಟಕದ ಕಾರ್ಯಕಾರಿ ಸಮಿತಿಯ ವಿಶೇಷ ಆಹ್ವಾನಿತ ಸದಸ್ಯರಾಗಿ ಬಳ್ಳಾರಿಯ ಚಾನಳ್ ಶೇಖರ್ ಅವರನ್ನು ನೇಮಕ ಮಾಡಲಾಗಿದೆ.

ಮಹಾಸಭಾದ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ಶಂಕರ್ ಬಿದರಿ ಅವರ ಆದೇಶದ ಮೇರೆಗೆ ಈ ನೇಮಕಾತಿ ಮಾಡಲಾಗಿದೆ. ಸಂಘಟನೆಯ ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಮುದಾಯದ ಸಂಘಟನೆ ಹಾಗೂ ಅಭಿವೃದ್ಧಿಗೆ ಸಹಕರಿಸುವಂತೆ ಅವರಿಗೆ ಜವಾಬ್ದಾರಿ ನೀಡಲಾಗಿದೆ.

ನೂತನ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವ ಮೂಲಕ ಮಹಾಸಭಾದ ಸಂಘಟನಾ ಚಟುವಟಿಕೆಗಳಿಗೆ ಮತ್ತಷ್ಟು ಬಲ ತುಂಬಲಿದ್ದಾರೆ ಎಂಬ ವಿಶ್ವಾಸವನ್ನು ಮಹಾಸಭಾ ವ್ಯಕ್ತಪಡಿಸಿದೆ. ಈ ಮೂಲಕ ಕರ್ನಾಟಕ ರಾಜ್ಯ ಕಾರ್ಯಕಾರಿ ಸಮಿತಿಯ ವಿಶೇಷ ಆಹ್ವಾನಿತ ಸದಸ್ಯರಾಗಿ ಚಾನಳ್ ಶೇಖರ್ ಅವರು ಜವಾಬ್ದಾರಿ ವಹಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here