ಕೇರಳ–ತಮಿಳುನಾಡು ಸೇರಿ ಐದು ರಾಜ್ಯಗಳಿಗೆ ಚುನಾವಣಾ ವೇಳಾಪಟ್ಟಿ ಪ್ರಕಟ; ಮಾದರಿ ನೀತಿ ಸಂಹಿತೆ ಜಾರಿ

0
2
Advertisement

ನವದೆಹಲಿ, ಮಾ.15: ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಇದರೊಂದಿಗೆ ಈ ಐದು ರಾಜ್ಯಗಳಲ್ಲೂ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ.

ಅಸ್ಸಾಂ, ಕೇರಳ ಹಾಗೂ ಪುದುಚೇರಿಯಲ್ಲಿ ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ತಮಿಳುನಾಡಿನಲ್ಲಿ ಏಪ್ರಿಲ್ 23ರಂದು ಮತದಾನ ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 23 ಮತ್ತು 29ರಂದು ಮತದಾನ ನಡೆಯಲಿದೆ.

ಈ ಐದು ರಾಜ್ಯಗಳಲ್ಲಿನ ಚುನಾವಣಾ ಫಲಿತಾಂಶವನ್ನು 2026ರ ಮೇ 4ರಂದು ಪ್ರಕಟಿಸಲಾಗುತ್ತದೆ ಎಂದು ಆಯೋಗ ತಿಳಿಸಿದೆ. ಎಲ್ಲ ವಿಧಾನಸಭೆಗಳ ಅವಧಿಯೂ ಮೇ ತಿಂಗಳಲ್ಲಿ ಕೊನೆಗೊಳ್ಳುತ್ತಿರುವ ಹಿನ್ನೆಲೆ ಏಪ್ರಿಲ್–ಮೇ ತಿಂಗಳಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ವೇಳಾಪಟ್ಟಿ ರೂಪಿಸಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ವೇಳಾಪಟ್ಟಿ ಪ್ರಕಟವಾದ ಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. 2021ರಲ್ಲಿ ಇದೇ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಫೆಬ್ರವರಿ 26ರಂದು ಘೋಷಿಸಲಾಗಿತ್ತು. ಆಗ ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಎಂಟು ಹಂತಗಳಲ್ಲಿ ನಡೆದಿತ್ತು.

Advertisement

LEAVE A REPLY

Please enter your comment!
Please enter your name here