Advertisement 

ವೃಕ್ಷ ಮಾತೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ತಿಮ್ಮಕ್ಕ ನವೆಂಬರ್ 2ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ. ಅವರಿಗೆ 114 ವರ್ಷ ವಯಸ್ಸಾಗಿತ್ತು.
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಜನಿಸಿದ ತಿಮ್ಮಕ್ಕ ತಮ್ಮ ಜೀವನವನ್ನು ಮರ ನೆಡುವ ಮೂಲಕ ಕಳೆದವರು. ರಾಜ್ಯ ಹೆದ್ದಾರಿ 99 ರ ಕುದೂರಿನಿಂದ ಹುಲಿಕಲ್ ಮಾರ್ಗದ ನಡುವೆ ತಿಮ್ಮಕ್ಕ ನೆಟ್ಟಿರುವ ಮರಗಳು ಕಾಣಸಿಗುತ್ತವೆ. ಕನ್ನಡ ನಾಡಿನ ಹೆಮ್ಮೆಯ ಸಾಧಕಿಯಾದ ಸಾಲು ಮರದ ತಿಮ್ಮಕ್ಕ ಅವರಿಗೆ ಪದ್ಮಶ್ರೀ ಸೇರಿದಂತೆ ಹಲವು ಪ್ರಶಸ್ತಿಗಳು ಅರಸಿ ಬಂದಿವೆ.
Advertisement 





