ಮಾಜಿ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಅಸ್ವಸ್ಥ; ಆಸ್ಪತ್ರೆಗೆ ದಾಖಲು

0
2
Advertisement

ಬೆಂಗಳೂರು, ಏ.04: ಮಾಜಿ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಅವರು ಕಾರ್ಯಕ್ರಮದ ಮಧ್ಯೆ ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ನಗರದಲ್ಲಿ ನಡೆದಿದೆ.

ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂತೋಷ್ ಹೆಗ್ಡೆ ಅವರು ಭಾಷಣ ಮಾಡುತ್ತಿದ್ದ ವೇಳೆ ಅಸ್ವಸ್ಥಗೊಂಡರು. ಭಾಷಣ ಮುಗಿಸಿ ಕುಳಿತುಕೊಳ್ಳುವ ಸಂದರ್ಭದಲ್ಲಿ ದಿಢೀರ್ ಕುಸಿದು ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

ತಕ್ಷಣವೇ ಸ್ಥಳದಲ್ಲಿದ್ದ ಸಿಬ್ಬಂದಿ ಹಾಗೂ ಅಧಿಕಾರಿಗಳು ಅವರನ್ನು ಹೈಗ್ರೌಂಡ್ಸ್ ಠಾಣೆ ಸಮೀಪದ ಮಣಿಪಾಲ ಆಸ್ಪತ್ರೆಗೆ ಸಾಗಿಸಿದ್ದಾರೆ. ವೈದ್ಯರು ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಸ್ಕೌಟ್ಸ್ ಮತ್ತು ಗೈಡ್ಸ್ ಆಯುಕ್ತ ಪಿಜಿಆರ್ ಸಿಂಧ್ಯಾ ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಧಾನಸಭಾಧ್ಯಕ್ಷ ಯುಟಿ ಖಾದರ್ ಅವರ ಕಾರಿನಲ್ಲೇ ಸಂತೋಷ್ ಹೆಗ್ಡೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಪ್ರಸ್ತುತ ಅವರ ಆರೋಗ್ಯದ ಬಗ್ಗೆ ವೈದ್ಯರು ಗಮನ ವಹಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Advertisement

LEAVE A REPLY

Please enter your comment!
Please enter your name here