ಮಾನವ ಹಕ್ಕು ಉಲ್ಲಂಘನೆ ಪ್ರಕರಣ; ಬಾಂಗ್ಲಾ ಮಾಜಿ ಪ್ರಧಾನಿಗೆ ಗಲ್ಲು!

0
18
Advertisement

ಢಾಕಾ, ನ.17: ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ ಅವರಿಗೆ ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಗಲ್ಲು ಶಿಕ್ಷೆ ವಿಧಿಸಿದೆ.

ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯ ತ್ರಿಸದಸ್ಯ ನ್ಯಾಯಪೀಠವು ಶೇಖ್‌ ಹಸೀನಾ ಅವರ ಮೇಲಿರುವ ಆರೋಪ ಸಾಬೀತಾಗಿದ್ದು, ದೋಷಿ ಎಂದು ತೀರ್ಪು ನೀಡಿದೆ. ನಂತರದಲ್ಲಿ ಗಲ್ಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

2024ರಲ್ಲಿ ವಿದ್ಯಾರ್ಥಿಗಳ ನೇತೃತ್ವದಲ್ಲಿ ದೇಶದಾದ್ಯಂತ ಭುಗಿಲೆದ್ದ ದಂಗೆಗಳ  ‘ಮಾರಕ ದಮನ’ಕ್ಕೆ ಹಸೀನಾ ನೇರ ಸೂಚನೆ ನೀಡಿದ್ದಾಗಿ ನ್ಯಾಯಾಲಯವು ಸ್ಪಷ್ಟಪಡಿಸಿದೆ. ಶೇಖ್ ಹಸೀನಾ ಅವರ ಈ ನಡೆಯಿಂದ ಬಾಂಗ್ಲಾದೇಶದಲ್ಲಿ ಸಾಕಷ್ಟು ಹಿಂಸಾಚಾರ ನಡೆದಿತ್ತು. ನೂರಾರು ಪ್ರಜೆಗಳು ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ಶೇಖ್ ಹಸೀನಾ ಅವರನ್ನು ಪ್ರಮುಖ ಆರೋಪಿಯಾಗಿಸಲಾಗಿತ್ತು.

ಶೇಖ್ ಹಸೀನಾ ಮಾತ್ರವಲ್ಲದೇ, ಅವರ ಆಪ್ತರಾಗಿದ್ದ ಮಾಜಿ ಗೃಹ ಸಚಿವ ಅಸಾದುಜ್ಜಮಾನ್ ಖಾನ್ ಕಮಲ್ ಮತ್ತು ಮಾಜಿ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಚೌಧರಿ ಅಬ್ದುಲ್ಲಾ ಅಲ್-ಮಾಮುನ್ ಅವರನ್ನೂ ಕೋರ್ಟ್‌ ದೋಷಿ ಎಂದು ಹೇಳಿದೆ.

Advertisement

LEAVE A REPLY

Please enter your comment!
Please enter your name here