ಐಪಿಎಲ್ ಫೈನಲ್ ದಿನ ‘ಉಚಿತ ಮೆಟ್ರೋ’ ವದಂತಿ; ಬಿಎಂಆರ್‌ಸಿಎಲ್‌ನಿಂದ ಸ್ಪಷ್ಟನೆ

0
2

ಬೆಂಗಳೂರು, ಮೇ 30: ಮೇ 31ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ಐಪಿಎಲ್ ಫೈನಲ್ ಪಂದ್ಯದ ದಿನ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಅಭಿಮಾನಿಗಳಿಗೆ ಉಚಿತ ಮೆಟ್ರೋ ಪ್ರಯಾಣ ಸೌಲಭ್ಯ ನೀಡಲಾಗುತ್ತದೆ ಎಂಬ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳು ಸುಳ್ಳು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್‌) ಸ್ಪಷ್ಟಪಡಿಸಿದೆ.

ಐಪಿಎಲ್ ಫೈನಲ್ ದಿನದಂದು RCB ಬೆಂಬಲಿಗರು ನಮ್ಮ ಮೆಟ್ರೋ ಸೇವೆಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಕೆಲವು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಮತ್ತು ಜಾಹೀರಾತುಗಳು ಪ್ರಸಾರವಾಗುತ್ತಿವೆ. ಆದರೆ, ಇಂತಹ ಯಾವುದೇ ಯೋಜನೆಯನ್ನು ಬಿಎಂಆರ್‌ಸಿಎಲ್‌ ಘೋಷಿಸಿಲ್ಲ ಎಂದು ನಿಗಮ ತಿಳಿಸಿದೆ.

RCB ಅಭಿಮಾನಿಗಳಿಗೆ ಉಚಿತ ಮೆಟ್ರೋ ಪ್ರಯಾಣ ನೀಡುವುದಾಗಿ ಪ್ರಚಾರ ಮಾಡಲು ಯಾವುದೇ ವ್ಯಕ್ತಿ, ಸಂಸ್ಥೆ ಅಥವಾ ಸಂಘಟನೆಗೆ ಅನುಮತಿ ನೀಡಿಲ್ಲ. ಮೆಟ್ರೋದಲ್ಲಿ ಪ್ರಯಾಣಿಸುವ ಎಲ್ಲರೂ ಕಡ್ಡಾಯವಾಗಿ ಮಾನ್ಯ ಟಿಕೆಟ್ ಖರೀದಿಸಬೇಕು ಅಥವಾ ಸ್ಮಾರ್ಟ್ ಕಾರ್ಡ್, ಕ್ಯೂಆರ್ ಟಿಕೆಟ್, ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡ್ (ಎನ್‌ಸಿಎಂಸಿ) ಸೇರಿದಂತೆ ಅನುಮೋದಿತ ಪಾವತಿ ವಿಧಾನಗಳ ಮೂಲಕ ಪ್ರಯಾಣ ದರ ಪಾವತಿಸಬೇಕು ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ಅನಧಿಕೃತ ಸಾಮಾಜಿಕ ಮಾಧ್ಯಮ ಸಂದೇಶಗಳು ಹಾಗೂ ಜಾಹೀರಾತುಗಳನ್ನು ನಂಬಬಾರದು ಎಂದು ಸಾರ್ವಜನಿಕರಿಗೆ ನಿಗಮ ಮನವಿ ಮಾಡಿದೆ.

LEAVE A REPLY

Please enter your comment!
Please enter your name here