ಶಾಲಾ ಬಾಲಕಿಯರಿಗೆ ಉಚಿತವಾಗಿ ಸ್ಯಾನಿಟರಿ ಪ್ಯಾಡ್‌: ಸುಂಪ್ರೀ ಕೋರ್ಟ್‌ ಮಹತ್ವದ ಆದೇಶ!

0
62

ನವದೆಹಲಿ, ಜ.31: ಗೌರವ, ಸಮಾನತೆ ಹಾಗೂ ಲಿಂಗ ನ್ಯಾಯವನ್ನು ಖಚಿತಪಡಿಸುವ ಐತಿಹಾಸಿಕ ತೀರ್ಪಿನಲ್ಲಿ, ದೇಶದ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಬಾಲಕಿಯರಿಗೆ ಉಚಿತವಾಗಿ ಜೈವಿಕವಾಗಿ ಕರಗುವ ಸ್ಯಾನಿಟರಿ ಪ್ಯಾಡ್‌ಗಳನ್ನು ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ.

ಎಲ್ಲಾ ಶಾಲೆಗಳಲ್ಲಿ ಬಾಲಕರು–ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯಗಳ ವ್ಯವಸ್ಥೆ ಕಡ್ಡಾಯವಾಗಬೇಕು ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ಮುಟ್ಟಿನ ಆರೋಗ್ಯದ ಹಕ್ಕು ಸಂವಿಧಾನದಲ್ಲಿ ಹೇಳಲಾಗಿರುವ ಬದುಕುವ ಮೂಲಭೂತ ಹಕ್ಕಿನ ಭಾಗವಾಗಿದೆ ಎಂದು ಅಭಿಪ್ರಾಯಪಟ್ಟಿದೆ.

ಮುಟ್ಟಿನ ಆರೋಗ್ಯದ ಹಕ್ಕು ಸಂವಿಧಾನದ 21 ನೇ ವಿಧಿಯಡಿ ನೀಡಲಾಗಿರುವ ಬದುಕುವ ಹಕ್ಕಿನ ಭಾಗವಾಗಿದೆ. ಖಾಸಗಿ ಶಾಲೆಗಳು ಈ ಸೌಲಭ್ಯ ಒದಗಿಸಲು ವಿಫಲವಾದರೆ, ಮಾನ್ಯತೆ ರದ್ದುಗೊಳಿಸಲಾಗುವುದು. ಹೆಣ್ಣು ಮಕ್ಕಳಿಗೆ ಶೌಚಾಲಯ ಮತ್ತು ಉಚಿತ ಸ್ಯಾನಿಟರಿ ಪ್ಯಾಡ್‌ ಒದಗಿಸಲು ಸರ್ಕಾರಗಳು ವಿಫಲವಾದರೆ ಅದನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ನ್ಯಾಯ ಪೀಠ ಹೇಳಿದೆ.

LEAVE A REPLY

Please enter your comment!
Please enter your name here