Advertisement 

ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆಯ ಪರಿಣಾಮ ಸಕಲೇಶಪುರ ತಾಲ್ಲೂಕಿನ ಪಶ್ಚಿಮ ಘಟ್ಟದ ಸಾಲಿನಲ್ಲಿ ಬಿಸಿಲೆ ಘಾಟ್ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿದೆ.
ರಾಜ್ಯ ಹೆದ್ದಾರಿ 85ರ ಅಡ್ಡಹೊಳೆ ಸಮೀಪ ರಸ್ತೆಗೆ ಭಾರೀ ಪ್ರಮಾಣದ ಮಣ್ಣು ಹಾಗೂ ಗುಡ್ಡ ಕುಸಿದು ಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಮುಂಜಾನೆ 3 ಗಂಟೆಯಿಂದ ಬಿಸಿಲೆ–ಕುಕ್ಕೆ ಸುಬ್ರಹ್ಮಣ್ಯ ಮಾರ್ಗದಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಸತತ ಐದು ಗಂಟೆಗಳ ಕಾಲ ವಾಹನಗಳು ಅಚಲವಾಗಿ ನಿಂತಿವೆ.
ಘಟನೆಯ ಬಳಿಕ ಕಂದಾಯ ಇಲಾಖೆ ಸಿಬ್ಬಂದಿ ಮಣ್ಣು ತೆರವು ಕಾರ್ಯಾಚರಣೆಗೆ ಕೈಗೊಂಡಿದ್ದಾರೆ. ಕಳೆದ ಮೂರು ದಿನಗಳಿಂದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಈ ಅವಘಡ ಸಂಭವಿಸಿದೆ.
Advertisement 
