ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 28ರಂದು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಸುರಿಯುತ್ತಿರುವ ಮಳೆಯಿಂದಾಗಿ ಹತ್ತು ತಾಲೂಕುಗಳ ಅಂಗನವಾಡಿ, ಶಾಲೆ ಮತ್ತು ಕಾಲೇಜುಗಳಿಗೆ ರಜೆ ನೀಡುವಂತೆ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದಾರೆ.
ಮತ್ತಷ್ಟು ಓದಿ: ಅನುಶ್ರೀ–ರೋಷನ್ ಹಳದಿ ಶಾಸ್ತ್ರದ ಚಿತ್ರಗಳು ವೈರಲ್ ಆಗಸ್ಟ್ 28ರಂದು ಮದುವೆ ಆಗಲಿರುವ ನಿರೂಪಕಿ
ಕಾರವಾರ, ಅಂಕೋಲ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಜೋಯಿಡಾ ಹಾಗೂ ದಾಂಡೇಲಿ ಭಾಗಗಳಿಗೆ ರಜೆ ಅನ್ವಯವಾಗಲಿದೆ. ಇದೇ ವೇಳೆ ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಶರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಲಿಂಗನಮಕ್ಕಿ ಜಲಾಶಯದಿಂದ 36,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.
ಜಲಾಶಯದ ಗರಿಷ್ಠ ಮಟ್ಟ 1819.00 ಮೀಟರ್ ಆಗಿದ್ದು, ಪ್ರಸ್ತುತ ನೀರಿನ ಮಟ್ಟ 1819.65 ಮೀಟರ್ ತಲುಪಿದೆ. ಜಲಾಶಯಕ್ಕೆ 20,154 ಕ್ಯೂಸೆಕ್ ನೀರಿನ ಒಳ ಹರಿವು ದಾಖಲಾಗಿದ್ದು, ಇನ್ನೂ ಮೂರು ದಿನ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ನದಿಪಾತ್ರ ಮತ್ತು ಸಮುದ್ರ ತೀರ ಪ್ರದೇಶಗಳಿಗೆ ಪ್ರವಾಸಿಗರು ತೆರಳುವುದನ್ನು ಜಿಲ್ಲಾಡಳಿತ ನಿಷೇಧಿಸಿದೆ.
