ಟಿಕೆಟ್, ಲಡ್ಡು ಪ್ರಸಾದ ಮಾರಾಟದಿಂದ ₹25.36 ಕೋಟಿ ಆದಾಯ
ಹಾಸನ ನ.11: ನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹಾಸನದ ಅಧಿದೇವತೆ ಶ್ರೀ ಹಾಸನಾಂಬೆ ದೇವಿಯ ಐತಿಹಾಸಿಕ ದರ್ಶನೋತ್ಸವಕ್ಕೆ ಇಂದು ತೆರೆ ಬೀಳಲಿದೆ. ಮಧ್ಯಾಹ್ನ 12.30ಕ್ಕೆ ಗರ್ಭಗುಡಿಯ ಬಾಗಿಲು ಮುಚ್ಚುವ ಮೂಲಕ ಈ ವರ್ಷದ ದರ್ಶನೋತ್ಸವಕ್ಕೆ ಅಧಿಕೃತವಾಗಿ ತೆರೆ ಬೀಳಲಿದೆ.
ಈ ಬಾರಿ ದೇವಿಯ ದರ್ಶನಕ್ಕಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದು, ಇದುವರೆಗೆ 31 ಲಕ್ಷಕ್ಕೂ ಅಧಿಕ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ.
ದರ್ಶನೋತ್ಸವದ ಅವಧಿಯಲ್ಲಿ ಟಿಕೆಟ್ ಹಾಗೂ ಲಡ್ಡು ಪ್ರಸಾದ ಮಾರಾಟದಿಂದ ಒಟ್ಟು ₹25.36 ಕೋಟಿ ಆದಾಯ ಸಂಗ್ರಹವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಅವರ ಸಮ್ಮುಖದಲ್ಲಿ ದರ್ಶನೋತ್ಸವದ ಸಮಾರೋಪ ಪ್ರಕ್ರಿಯೆ ನಡೆಯಲಿದೆ.




