ಭಾರತೀಯ ಅಂಚೆ ಇಲಾಖೆಯಿಂದ ಮೂವತ್ತು ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನ

0
57

ನವದೆಹಲಿ, ಡಿ.30: ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ಅಂಚೆ ಇಲಾಖೆ ಭರ್ಜರಿ ಅವಕಾಶ ಒದಗಿಸಿದೆ. ದೇಶಾದ್ಯಂತ ಖಾಲಿ ಇರುವ 30,000 ಗ್ರಾಮೀಣ ಡಾಕ್ ಸೇವಕ್ (GDS) ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಗ್ರಾಮೀಣ ಡಾಕ್ ಸೇವಕ್ ಅಡಿಯಲ್ಲಿ ಬ್ರಾಂಚ್ ಪೋಸ್ಟ್ ಮಾಸ್ಟರ್ (BPM), ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ (ABPM) ಹಾಗೂ ಪೋಸ್ಟ್‌ಮ್ಯಾನ್ ಹುದ್ದೆಗಳು ಒಳಗೊಂಡಿವೆ. 10ನೇ, 12ನೇ ತರಗತಿ ಅಥವಾ ಪಿಯುಸಿ ತೇರ್ಗಡೆಯಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 2026ರ ಜನವರಿ 15 ಕೊನೆಯ ದಿನಾಂಕವಾಗಿದೆ.

ವಿದ್ಯಾರ್ಹತೆ

ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 10ನೇ, 12ನೇ ತರಗತಿ ಅಥವಾ ಪಿಯುಸಿ ಪೂರ್ಣಗೊಳಿಸಿರಬೇಕು. ಸ್ಥಳೀಯ ಭಾಷೆಯ ಜ್ಞಾನ, ಮೂಲ ಕಂಪ್ಯೂಟರ್ ತಿಳುವಳಿಕೆ ಹಾಗೂ ದ್ವಿಚಕ್ರ ವಾಹನ ಚಾಲನಾ ಪರವಾನಗಿ ಕಡ್ಡಾಯವಾಗಿದೆ.

ವಯೋಮಿತಿ

ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ವಯೋಸಡಿಲಿಕೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ

ಈ ನೇಮಕಾತಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ಸಿದ್ಧಪಡಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ

ಎಸ್‌ಸಿ/ಎಸ್‌ಟಿ/PWD/ಮಹಿಳಾ ಹಾಗೂ ಟ್ರಾನ್ಸ್‌ವಿಮೆನ್ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಇತರ ಅಭ್ಯರ್ಥಿಗಳಿಗೆ ರೂ.100 ಶುಲ್ಕ ನಿಗದಿಪಡಿಸಲಾಗಿದ್ದು, ಆನ್‌ಲೈನ್ ಮೂಲಕ ಪಾವತಿಸಬಹುದು

ಆಸಕ್ತ ಅಭ್ಯರ್ಥಿಗಳು ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್‌ಸೈಟ್ indiapostgdsonline.gov.in ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

LEAVE A REPLY

Please enter your comment!
Please enter your name here