ನಾಗೇನಹಳ್ಳಿ; ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

0
14
Advertisement

ನಾಗೇನಹಳ್ಳಿ, ಜ.19: ಬಳ್ಳಾರಿಯ ಶ್ರೀ ಗುರು ಮರುಳ ಸಿದ್ದಾಶ್ರಮ ದಾಸರ ನಾಗೇನಹಳ್ಳಿಯಲ್ಲಿ ಶ್ರೀ ನಂಜುಂಡೇಶ್ವರ ಜನಸೇವ ಕಲ್ಯಾಣ ಟ್ರಸ್ಟ್ ಹಾಗೂ ಭಾರತೀಯ ಪಾಲಿ ಕ್ಲಿನಿಕ್ ಇವರ ಸಂಯುಕ್ತಾಶ್ರಯದಲ್ಲಿ ಭಾನುವಾರ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಶಿಬಿರದಲ್ಲಿ ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳ ಸುಮಾರು 216 ಮಂದಿ ಭಾಗವಹಿಸಿ ವಿವಿಧ ಆರೋಗ್ಯ ತಪಾಸಣೆಗಳನ್ನು ಮಾಡಿಸಿಕೊಂಡರು.

ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆದ ಶಿಬಿರದಲ್ಲಿ ರಕ್ತದೊತ್ತಡ, ಮಧುಮೇಹ ಸೇರಿದಂತೆ ಸಾಮಾನ್ಯ ಆರೋಗ್ಯ ತಪಾಸಣೆ ನಡೆಸಲಾಗಿದ್ದು, ವೈದ್ಯರು ಅಗತ್ಯ ಸಲಹೆಗಳನ್ನು ನೀಡಿದರು. ಗ್ರಾಮೀಣ ಪ್ರದೇಶದ ಜನರಿಗೆ ಆರೋಗ್ಯ ಅರಿವು ಮೂಡಿಸುವ ಉದ್ದೇಶದಿಂದ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಸ್ಥಳೀಯರು ಶಿಬಿರಕ್ಕೆ ಉತ್ತಮ ಪ್ರತಿಕ್ರಿಯೆ ನೀಡಿದ್ದು, ಮುಂದಿನ ದಿನಗಳಲ್ಲಿಯೂ ಇಂತಹ ಜನಪರ ಕಾರ್ಯಕ್ರಮಗಳನ್ನು ಆಯೋಜಿಸುವುದಾಗಿ ಟ್ರಸ್ಟ್‌ ಹಾಗೂ ಕ್ಲಿನಿಕ್‌ ಪ್ರತಿನಿಧಿಗಳು ತಿಳಿಸಿದ್ದಾರೆ.

Advertisement

LEAVE A REPLY

Please enter your comment!
Please enter your name here