ಆಂಧ್ರದಲ್ಲಿ ನಕ್ಸಲ್ ಕಾರ್ಯಾಚರಣೆ: 6 ಮಂದಿ ನಕ್ಸಲರ ಎನ್ ಕೌಂಟರ್!

0
20
Advertisement

ವಿಶಾಖಪಟ್ಟಣ, ನ.18: ಆಂಧ್ರಪ್ರದೇಶದ ಅಲ್ಲೂರಿ ಸೀತರಾಮ ರಾಜು ಜಿಲ್ಲೆಯಲ್ಲಿ ಪೋಲಿಸರು ನಕ್ಸಲ್ ಕಾರ್ಯಾಚರಣೆ ನಡೆಸಿದ್ದು, 6 ಮಂದಿ ನಕ್ಸಲರನ್ನು ಎನ್ ಕೌಂಟರ್ ಮೂಲಕ ಹತ್ಯೆಗೆಯ್ಯಲಾಗಿದೆ. ಮಾರೆಡುಮಿಲ್ಲಿ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಮಂಗಳವಾರ ಬೆಳಿಗ್ಗೆ ಪೋಲಿಸರು ಮತ್ತು ನಕ್ಸಲರ ಮಧ್ಯೆ ಗುಂಡಿನ ಚಕಮಕಿ ನಡೆದಿದ್ದು, ನಿಷೇಧಿತ ಮಾವೋವಾದಿ ಸಂಘಟನೆಯ ನಾಯಕ ಸೇರಿ ಆರು ಮಂದಿ ನಕ್ಸಲರನ್ನು ಹತ್ಯೆ ಗೆಯ್ಯಲಾಗಿದೆ ಮತ್ತು ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೋಲಿಸ್ ವರಿಷ್ಠಾಧಿಕಾರಿ ಅಮಿತ್ ಬರ್ದಾರ್ ಹೇಳಿದ್ದಾರೆ.

ಗುಂಡಿನ ಚಕಮಕಿಯಲ್ಲಿ ಯಾವುದೇ ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿಲ್ಲ. ಹತ್ಯೆಯಾದ ನಕ್ಸಲರ ಗುರುತು ಮತ್ತು ಗಾಯಗೊಂಡವರ ವಿವರಗಳನ್ನು ಕಲೆಹಾಕಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಕಳೆದ ಆರು ತಿಂಗಳಲ್ಲಿ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ನಡೆದ ಎರಡನೇ ಪ್ರಮುಖ ಎನ್‌ಕೌಂಟರ್ ಇದಾಗಿದೆ. ಇದೇ ವರ್ಷ ಮೇ 7ರಂದು ವೈ. ರಾಮಾವರಂ ಮಂಡಲ ಅರಣ್ಯ ಪ್ರದೇಶದಲ್ಲಿ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಾವೋವಾದಿಗಳು ಮೃತಪಟ್ಟಿದ್ದರು.

Advertisement

LEAVE A REPLY

Please enter your comment!
Please enter your name here