ಹೊಸ ವರ್ಷ ಆಚರಣೆ; ಬೆಂಗಳೂರು ಪಾರ್ಕ್‌ಗಳು ಬಂದ್!

0
38
Advertisement

ಬೆಂಗಳೂರು, ಡಿ.27: ಹೊಸ ವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಬೆಂಗಳೂರಿನ ಪಾರ್ಕ್‌ಗಳು ಮತ್ತು ಕೆರೆಗಳಿಗೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಡಿಸೆಂಬರ್ 31ರ ಬುಧವಾರ ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಿಗ್ಗೆ 5 ಗಂಟೆಯವರೆಗೆ ಈ ನಿರ್ಬಂಧ ಜಾರಿಯಲ್ಲಿರಲಿದೆ ಎಂದು ಕೇಂದ್ರ ನಗರ ಪಾಲಿಕೆ ಸುತ್ತೋಲೆ ಹೊರಡಿಸಿದೆ.

ಹೊಸ ವರ್ಷಾಚರಣೆಯ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಒಟ್ಟಾಗಿ ಸೇರುವ ಸಾಧ್ಯತೆ ಇರುವುದರಿಂದ, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಹಾಗೂ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ. ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ಉದ್ಯಾನವನಗಳು ಮತ್ತು ಕೆರೆಗಳಿಗೆ ಈ ಆದೇಶ ಅನ್ವಯವಾಗಲಿದೆ.

ಸಾಮಾನ್ಯವಾಗಿ ನಗರದ ಪಾರ್ಕ್‌ಗಳು ರಾತ್ರಿ 9 ಗಂಟೆಯವರೆಗೆ ಸಾರ್ವಜನಿಕರಿಗೆ ತೆರೆದಿರುತ್ತವೆ. ಆದರೆ, ಹೊಸ ವರ್ಷದ ಹಿಂದಿನ ದಿನ ರಾತ್ರಿ ಪಾರ್ಕ್‌ಗಳಲ್ಲಿ ಜನಸಂದಣಿ ಹೆಚ್ಚಾಗುವ ಹಿನ್ನೆಲೆಯಲ್ಲಿ, ಅನಾಹುತಗಳ ಸಂಭವಕ್ಕೆ ಅವಕಾಶ ನೀಡದಂತೆ ಈ ಬಾರಿ ವಿಶೇಷ ನಿರ್ಬಂಧ ವಿಧಿಸಲಾಗಿದೆ. ಸಂಜೆ 6 ಗಂಟೆಯಿಂದ ಮುಂದಿನ ದಿನ ಬೆಳಗ್ಗೆ 5 ಗಂಟೆಯವರೆಗೆ ಪಾರ್ಕ್‌ಗಳು ಸಂಪೂರ್ಣವಾಗಿ ಮುಚ್ಚಿರಲಿವೆ ಎಂದು ಪಾಲಿಕೆ ಸ್ಪಷ್ಟಪಡಿಸಿದೆ.

ನಾಗರಿಕರು ಸಹಕರಿಸಿ, ಸಾರ್ವಜನಿಕ ಸುರಕ್ಷತೆ ಮತ್ತು ಶಾಂತಿಗೆ ಸಹಾಯ ಮಾಡಬೇಕು ಎಂದು ಕೇಂದ್ರ ನಗರ ಪಾಲಿಕೆ ಮನವಿ ಮಾಡಿದೆ.

Advertisement

LEAVE A REPLY

Please enter your comment!
Please enter your name here