Welcome to BP News Karnataka   Click to listen highlighted text! Welcome to BP News Karnataka
Thursday, February 20, 2025
HomeUncategorizedNPS TO OPS: ಹಳೆ ಪಿಂಚಣಿ ಯೋಜನೆ ಜಾರಿ ಕುರಿತು ಗುಡ್‌ ನ್ಯೂಸ್‌ ಕೊಟ್ಟ ಸಿದ್ದರಾಮಯ್ಯ

NPS TO OPS: ಹಳೆ ಪಿಂಚಣಿ ಯೋಜನೆ ಜಾರಿ ಕುರಿತು ಗುಡ್‌ ನ್ಯೂಸ್‌ ಕೊಟ್ಟ ಸಿದ್ದರಾಮಯ್ಯ

ಬೆಂಗಳೂರು, ಫೆಬ್ರವರಿ 20:

Bp News Karnataka

ಕರ್ನಾಟಕದ ಸರ್ಕಾರಿ ನೌಕರರು ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ (ಒಪಿಎಸ್) ಮರು ಜಾರಿಗೊಳಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಈ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಭರವಸೆಯನ್ನ ರಾಜ್ಯ ಸರ್ಕಾರಿ ನೌಕರರಿಗೆ ನೀಡಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ನಡೆದ ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರ ಹಾಗೂ ಜಿಲ್ಲೆ, ತಾಲ್ಲೂಕು ಶಾಖೆಗಳ ನಿರ್ದೇಶಕರ ಪದಾಧಿಕಾರಿಗಳ ಸಮಾವೇಶದಲ್ಲಿ ಆನ್‌ಲೈನ್ ಮೂಲಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸರ್ಕಾರಿ ನೌಕಕರರು ಹಲವು ಬೇಡಿಕೆ ನೀಡಿದ್ದಾರೆ.

ಸರ್ಕಾರಿ ನೌಕರರ ಮಹಾ ಸಮ್ಮೇಳದಲ್ಲಿ ನೀಡಲಾಗಿದ್ದ ಭರವಸೆಯಂತೆ ರಚಿಸಲಾಗಿದ್ದ ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ಸಮಿತಿಯ ಅಂತಿಮ ಸಭೆ ನಡೆಸಿದ್ದು, ಶೀಘ್ರದಲ್ಲಿ ವರದಿ ಪಡೆದು, ಸಮಿತಿ ಕೊಟ್ಟ ವರದಿಯನ್ನ ಪರಿಶೀಲಿಸಿ, ಅಧಿಕಾರಿಗಳ ಜೊತೆಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

ಹೊಸ ಪಿಂಚಣಿ ಯೋಜನೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಕಾಂಗ್ರೆಸ್ ಪ್ರಣಾಳಿಕೆಯನುಸಾರ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಅಧ್ಯಯನ ಸಮಿತಿ ವರದಿ ಬಳಿಕ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. 2006 ರ ಏಪ್ರಿಲ್ 1ರ ನಂತರ ನೇಮಕವಾಗಿರುವವರಿಗೆ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು ಎಂಬ ಸರ್ಕಾರಿ ನೌಕರರ ಬೇಡಿಕೆಯ ಸಾಧಕ-ಬಾಧಕಗಳ ಅಧ್ಯಯನಕ್ಕೆ ಸಮಿತಿಯನ್ನು ರಚಿಸಲಾಗಿದೆ. ಅದು ಕೊನೆಯ ಹಂತದ ಸಭೆ ನಡೆಸಿದೆ. ಅದೇ ರೀತಿ 2015 ರಲ್ಲಿ ನಗದು ರಹಿತ ಜ್ಯೋತಿ ಸಂಜೀವಿನಿ ಯೋಜನೆಯನ್ನು 7 ಗಂಭೀರ ಕಾಯಿಲೆಗಳಿಗೆ ಅನುಷ್ಠಾನಕ್ಕೆ ತರಲಾಗಿದೆ. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ತಾಂತ್ರಿಕ ಕಾರಣಗಳಿಂದಾಗಿ ವಿಳಂಬವಾಗಿದ್ದು, ಶೀಘ್ರವಾಗಿ ಅದನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news
Click to listen highlighted text!