ತಿರುವನಂತಪುರಂ, ಆ.08: ಕೇರಳದ ಏಳು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಆರೆಂಜ್ ಅಲರ್ಟ್ ಘೋಷಿಸಿದೆ.
ಪಥನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಕೋಯಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ.
ಶುಕ್ರವಾರ ಕೇರಳದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕಾಸರಗೋಡು, ಕಣ್ಣೂರು, ವಯನಾಡು ಮತ್ತು ಕೋಯಿಕ್ಕೋಡ್ ಜಿಲ್ಲೆಗಳಿಗೆ ಐಎಂಡಿ ರೆಡ್ ಅಲರ್ಟ್ ಘೋಷಿಸಿತ್ತು. ಇದೀಗ ಈ ಜಿಲ್ಲೆಗಳು ಸೇರಿದಂತೆ ಒಟ್ಟು ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.




