ಚಪ್ಪಲಿ ಧರಿಸಿಕೊಂಡೇ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ; ಬಾನು ಮುಷ್ತಾಕ್ ನಡೆಗೆ ವಿರೋಧ!

0
24
Advertisement

ಮಂಡ್ಯ, ಮಾ.15: ಕಾರ್ಯಕ್ರಮವೊಂದರಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸಾಹಿತಿ ಬಾನು ಮುಷ್ತಾಕ್ ಚಪ್ಪಲಿ ಧರಿಸಿಕೊಂಡೇ ಪುಷ್ಪನಮನ ಸಲ್ಲಿಸಿದ ಘಟನೆ ವಿವಾದಕ್ಕೆ ಕಾರಣವಾಗಿದೆ.

ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಶನಿವಾರ ನಡೆದ ‘ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ಜನಜಾಗೃತಿ ಸಮಾವೇಶ’ದಲ್ಲಿ ಈ ಘಟನೆ ನಡೆದಿದೆ. ಸಮಾವೇಶದ ಆರಂಭದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ವೇಳೆ ಬಾನು ಮುಷ್ತಾಕ್ ಮುಂದೆ ಬಂದಾಗ, ಸಂಘಟಕರು ಚಪ್ಪಲಿ ಬಿಟ್ಟು ಬರುವಂತೆ ಮನವಿ ಮಾಡಿದ್ದಾರೆ

ಆದರೆ ಅದಕ್ಕೆ ಅವರು ಒಪ್ಪದೇ, ಚಪ್ಪಲಿ ಧರಿಸಿಕೊಂಡೇ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಇದರಿಂದ ಕೆಲವರಲ್ಲಿ ಅಸಮಾಧಾನ ವ್ಯಕ್ತವಾಗಿದ್ದು, ಘಟನೆ ವಿವಾದಕ್ಕೆ ತಿರುಗಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಬಾನು ಮುಷ್ತಾಕ್, ತಮ್ಮ ನಡೆಗೆ ಸಮರ್ಥನೆ ನೀಡಿದರು. “ಚಪ್ಪಲಿ ಹೊಲೆಯುವುದು ನಮ್ಮ ವೃತ್ತಿ. ಚಪ್ಪಲಿ ನಮ್ಮ ಮನೆ ದೇವರು. ಅದು ನಮ್ಮ ಅಸ್ಮಿತೆಯ ಸಂಕೇತ. ನಾವು ಚಪ್ಪಲಿ ಹೊಲಿಯುವವರು, ಆದ್ದರಿಂದ ಅದರ ಬಗ್ಗೆ ನಮಗೆ ಅಪಾರ ಗೌರವವಿದೆ,” ಎಂದು ಅವರು ಹೇಳಿದ್ದಾರೆ.

Advertisement

LEAVE A REPLY

Please enter your comment!
Please enter your name here