ಪೀಣ್ಯ ಫ್ಲೈಓವರ್ ಐದು ದಿನ ಬಂದ್; ಸಂಚಾರಕ್ಕೆ ಪರ್ಯಾಯ ಮಾರ್ಗ ವ್ಯವಸ್ಥೆ

0
4
Advertisement

ಬೆಂಗಳೂರು, ಏಪ್ರಿಲ್ 11: ತುಮಕೂರು ರಸ್ತೆಯ ಪೀಣ್ಯ ಎಲಿವೇಟೆಡ್ ಫ್ಲೈಓವರ್‌ನ ಕೇಬಲ್ ದುರಸ್ತಿ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅಂತಿಮ ಹಂತದ ಲೋಡ್ ಟೆಸ್ಟಿಂಗ್ ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಏಪ್ರಿಲ್ 13ರಿಂದ ಐದು ದಿನಗಳ ಕಾಲ ಮೇಲ್ಸೇತುವೆಯನ್ನು ಸಂಪೂರ್ಣ ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದು ಪೀಣ್ಯ ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ಏಪ್ರಿಲ್ 13ರ ಬೆಳಗ್ಗೆ 5 ಗಂಟೆಯಿಂದ ಏಪ್ರಿಲ್ 17ರ ಬೆಳಗ್ಗೆ 11 ಗಂಟೆಯವರೆಗೆ ಫ್ಲೈಓವರ್ ಮೇಲೆ ಯಾವುದೇ ವಾಹನ ಸಂಚಾರಕ್ಕೆ ಅವಕಾಶ ಇರುವುದಿಲ್ಲ. ಈ ಅವಧಿಯಲ್ಲಿ ಸಾರ್ವಜನಿಕರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚಿಸಲಾಗಿದೆ.

ಪರ್ಯಾಯ ಮಾರ್ಗಗಳ ವಿವರ:

ನೆಲಮಂಗಲದಿಂದ ಬೆಂಗಳೂರು ಕಡೆಗೆ ಬರುವ ವಾಹನಗಳು ಕೆನ್ನಮೆಟಲ್ ವಿಡಿಯಾ ಸಮೀಪ ಫ್ಲೈಓವರ್ ಕೆಳಭಾಗದ ಎನ್‌ಎಚ್-4 ಹಾಗೂ ಸರ್ವಿಸ್ ರಸ್ತೆಯ ಮೂಲಕ 8ನೇ ಮೈಲಿ, ದಾಸರಹಳ್ಳಿ, ಜಾಲಹಳ್ಳಿ ಕ್ರಾಸ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್, ಎಸ್‌ಆರ್‌ಎಸ್ ಜಂಕ್ಷನ್ ಮತ್ತು ಗೊರಗುಂಟೆಪಾಳ್ಯ ಮೂಲಕ ಸಂಚರಿಸಬಹುದಾಗಿದೆ.

ಅದೇ ರೀತಿ ಸಿಎಂಟಿಐನಿಂದ ನೆಲಮಂಗಲ ಕಡೆಗೆ ಸಾಗುವ ವಾಹನಗಳು ಫ್ಲೈಓವರ್ ಕೆಳಭಾಗದ ಎನ್‌ಎಚ್-4 ಹಾಗೂ ಸರ್ವಿಸ್ ರಸ್ತೆ ಮೂಲಕ ಎಸ್‌ಆರ್‌ಎಸ್ ಜಂಕ್ಷನ್, ಪೀಣ್ಯ ಠಾಣೆ ಜಂಕ್ಷನ್, ಜಾಲಹಳ್ಳಿ ಕ್ರಾಸ್, ದಾಸರಹಳ್ಳಿ, 8ನೇ ಮೈಲಿ ಹಾಗೂ ಪಾರ್ಲೆ ಜಿ ಟೋಲ್ ಮೂಲಕ ಪ್ರಯಾಣಿಸಬಹುದಾಗಿದೆ.

ಸಾರ್ವಜನಿಕರು ಸಂಚಾರದಲ್ಲಿ ಅಡಚಣೆ ತಪ್ಪಿಸಲು ಸೂಚಿಸಿದ ಪರ್ಯಾಯ ಮಾರ್ಗಗಳನ್ನು ಅನುಸರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

Advertisement

LEAVE A REPLY

Please enter your comment!
Please enter your name here