Advertisement 

ಬೆಂಗಳೂರು, ಏಪ್ರಿಲ್ 9: ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಗುರುವಾರ ಪ್ರಕಟಿಸಲಾಗಿದ್ದು, ಈ ಬಾರಿ ಫಲಿತಾಂಶದಲ್ಲಿ ದಾಖಲೆ ಮಟ್ಟದ ಏರಿಕೆ ಕಂಡುಬಂದಿದೆ.
ಈ ಬಾರಿ ಒಟ್ಟು ಶೇ.86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕಳೆದ ವರ್ಷದಿಗಿಂತ ಶೇ.12ರಷ್ಟು ಹೆಚ್ಚಳವಾಗಿದೆ. ಕಳೆದ ವರ್ಷ ಶೇ.73.45ರಷ್ಟು ವಿದ್ಯಾರ್ಥಿಗಳು ಮಾತ್ರ ಉತ್ತೀರ್ಣರಾಗಿದ್ದರು.
ಈ ವರ್ಷ ಒಟ್ಟು 7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇವರಲ್ಲಿ ಸುಮಾರು 6.10 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಇದರೊಂದಿಗೆ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಗಮನಾರ್ಹ ಸುಧಾರಣೆ ಕಂಡುಬಂದಿದೆ.
ಶಿಕ್ಷಣ ಇಲಾಖೆ ಈ ಫಲಿತಾಂಶವನ್ನು ಮಹತ್ವದ ಸಾಧನೆ ಎಂದು ಪರಿಗಣಿಸಿದ್ದು, ವಿದ್ಯಾರ್ಥಿಗಳ ಶ್ರಮ ಹಾಗೂ ಶಿಕ್ಷಕರ ಮಾರ್ಗದರ್ಶನದಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ತಿಳಿಸಿದೆ.
Advertisement 





