ಮಂಗಳೂರು: ಕರ್ನಾಟಕ-ಕೇರಳ ಗಡಿ ಭಾಗದ ತಲಪಾಡಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಿಂದ ಬಾಲಕಿ ಸೇರಿ ಆರು ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಏಳು ಮಂದಿ ಗಾಯಗೊಂಡಿದ್ದಾರೆ.
ಬಸ್‌ಗೆ ಬ್ರೇಕ್ ಫೇಲ್ ಆಗಿದ್ದರಿಂದ ಚಾಲಕ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿ ನಿಂತಿದ್ದ ಜನರಿಗೆ ಡಿಕ್ಕಿ ಹೊಡೆದಿದ್ದು, ಅಲ್ಲೇ ನಿಂತಿದ್ದ ಆಟೋಕ್ಕೂ ಢಿಕ್ಕಿ ಹೊಡೆದಿದೆ.
ಈ ದುರಂತದಲ್ಲಿ ಮೂವರು ಮಹಿಳೆಯರು, ಇಬ್ಬರು ಪುರುಷರು ಮತ್ತು ಒಬ್ಬ ಬಾಲಕಿ ಪ್ರಾಣ ಕಳೆದುಕೊಂಡಿದ್ದಾರೆ. ಅಪಘಾತದ ವೇಳೆ ಕೆಲವರು ತುಂಗುದಾಣದಲ್ಲಿ ನಿಂತಿದ್ದ ಆಟೋ ರಿಕ್ಷಾದೊಳಗೆ ಇದ್ದರು.
ಮತ್ತಷ್ಟು ಓದಿ: ವಸತಿ ನಿಲಯದ ಶೌಚಾಲಯದಲ್ಲೇ 9ನೇ ತರಗತಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಘಟನೆ!
ಗಂಭೀರವಾಗಿ ಗಾಯಗೊಂಡ ಏಳು ಮಂದಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Advertisement 
