ಶೈಕ್ಷಣಿಕ ಹಾಗೂ ಸಮಾಜ ಸೇವೆ ಗುರುತಿಸಿ ರಾಜ್ಯಮಟ್ಟದ ಗೌರವ
ಬಳ್ಳಾರಿ, ಸೆ.25: ಶೈಕ್ಷಣಿಕ ಹಾಗೂ ಸಮಾಜ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯ ಸೇವೆಯನ್ನು ಗುರುತಿಸಿ, ಕಂಪ್ಲಿ ತಾಲೂಕಿನ ದೇವಸಮುದ್ರ ಗ್ರಾಮದ ಶಿಕ್ಷಕಿ ಶ್ರೀಮತಿ ನಾಗವೇಣಿ ಆರ್.ಹೆಚ್. ಅವರನ್ನು 2026-27ನೇ ಸಾಲಿನ 19ನೇ ಶ್ರೀಮತಿ ಸಾವಿತ್ರಿಬಾಯಿ ಫುಲೆ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ನವಭಾರತ ಉದಯ ಪ್ರತಿಷ್ಠಾನ (ರಿ.) ವತಿಯಿಂದ ನೀಡಲಾಗುತ್ತಿರುವ ಈ ರಾಜ್ಯ ಪ್ರಶಸ್ತಿಗೆ ನಾಗವೇಣಿ ಅವರ ಶೈಕ್ಷಣಿಕ ಸೇವೆ ಹಾಗೂ ಸಮಾಜಮುಖಿ ಕಾರ್ಯಗಳನ್ನು ಪರಿಗಣಿಸಿ ಆಯ್ಕೆ ಮಾಡಲಾಗಿದೆ.

ಸೆಪ್ಟೆಂಬರ್ 26, 2026ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನ ತಿಳಿಸಿದೆ.
ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕಿಗೆ ರಾಜ್ಯಮಟ್ಟದ ಗೌರವ ದೊರೆತಿರುವುದು ಬಳ್ಳಾರಿ ಜಿಲ್ಲೆಯ ಶಿಕ್ಷಣ ವಲಯಕ್ಕೆ ಹೆಮ್ಮೆಯ ಸಂಗತಿ ಎಂದು ಅಭಿನಂದನೆಗಳು ವ್ಯಕ್ತವಾಗಿವೆ.




