ಯಶ್ ಸಿನಿಮಾ ‘ಟಾಕ್ಸಿಕ್’ ಬಿಡುಗಡೆ ದಿನಾಂಕವನ್ನು ಮುಂದೂಡಿದ ಚಿತ್ರತಂಡ!

0
2
Advertisement

ಬೆಂಗಳೂರು, ಮಾ.04: ಮಾರ್ಚ್ 19 ರಂದು ಬಿಡುಗಡೆಯಾಗಬೇಕಿದ್ದ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ದಿನಾಂಕವನ್ನು ಚಿತ್ರತಂಡ ಮುಂದೂಡಿದೆ. ಪ್ರಸ್ರುತ ಅಂತಾರಾಷ್ಟ್ರೀಯ ಬಿಕ್ಕಟ್ಟುಗಳನ್ನು ಗಮನದಲ್ಲಿಟ್ಟುಕೊಂಡು ಮುಂದೂಡಲಾಗಿದೆ, ಮಾರ್ಚ್ 19ರ ಬದಲಾಗಿ ಜೂನ್ 04ರಂದು ಜಾಗತಿಕ ಮಟ್ಟದಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರ ತಂಡ ಪ್ರಕಟಿಸಿದೆ.

ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ನಿರ್ಮಾಣವಾಗಿರುವ ಈ ಚಿತ್ರವನ್ನು ಜಾಗತಿಕ ಪ್ರೇಕ್ಷಕರನ್ನು ಗಮನದಲ್ಲಿಟ್ಟುಕೊಂಡು ರೂಪಿಸಲಾಗಿದೆ. ಹಲವು ವರ್ಷಗಳ ಪರಿಶ್ರಮದ ನಂತರ ಚಿತ್ರವನ್ನು ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿತ್ತು. ಆದರೆ ಮಧ್ಯಪ್ರಾಚ್ಯ ಪ್ರದೇಶದಲ್ಲಿ ಉಂಟಾಗಿರುವ ಅನಿಶ್ಚಿತ ಪರಿಸ್ಥಿತಿಗಳು ಚಿತ್ರದ ಜಾಗತಿಕ ಬಿಡುಗಡೆಯ ಯೋಜನೆಗೆ ಪರಿಣಾಮ ಬೀರಿರುವುದರಿಂದ ಬಿಡುಗಡೆ ದಿನಾಂಕವನ್ನು ಬದಲಾಯಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.

ಪಾಲುದಾರರು ಮತ್ತು ಪ್ರೇಕ್ಷಕರ ಹಿತದೃಷ್ಟಿಯಿಂದ ಈ ಕಠಿಣ ಆದರೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಚಿತ್ರತಂಡ ಹೇಳಿದೆ. ಪ್ರೇಕ್ಷಕರು ತೋರಿಸಿರುವ ಸಹನೆ ಮತ್ತು ಬೆಂಬಲಕ್ಕೆ ಧನ್ಯವಾದಗಳನ್ನು ತಿಳಿಸಿರುವ ತಂಡ, ಮುಂದುವರಿದ ಪ್ರೀತಿ ಮತ್ತು ಬೆಂಬಲವನ್ನು ನಿರೀಕ್ಷಿಸುತ್ತಿದೆ.

‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರವು ಇಂಗ್ಲಿಷ್ ಹಾಗೂ ಭಾರತೀಯ ಭಾಷೆಗಳಲ್ಲಿ 2026ರ ಜೂನ್ 4ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

Advertisement

LEAVE A REPLY

Please enter your comment!
Please enter your name here