ಅನುಮತಿ ಇಲ್ಲದೆ ಹಾಡು ಬಳಕೆ: ನಟ ರಕ್ಷಿತ್ ಶೆಟ್ಟಿಗೆ ದೆಹಲಿ ಹೈಕೋರ್ಟ್ ದಂಡ!

0
6
Advertisement

ನವದೆಹಲಿ, ಏ.01:ಹಾಡುಗಳ ಕಾಪಿರೈಟ್ ಉಲ್ಲಂಘನೆ ಪ್ರಕರಣದಲ್ಲಿ ನಟ ರಕ್ಷಿತ್ ಶೆಟ್ಟಿ ಅವರಿಗೆ ದೆಹಲಿ ಹೈಕೋರ್ಟ್ ದಂಡ ವಿಧಿಸಿದೆ. ‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ಅನುಮತಿ ಇಲ್ಲದೆ ಹಾಡುಗಳನ್ನು ಬಳಸಿದ ಹಿನ್ನೆಲೆ, ರಕ್ಷಿತ್ ಶೆಟ್ಟಿ ಮಾಲೀಕತ್ವದ ಪರಂವಾ ಸ್ಟುಡಿಯೋಸ್ ಗೆ ₹25 ಲಕ್ಷ ಪರಿಹಾರ ಪಾವತಿಸಲು ನ್ಯಾಯಾಲಯ ಆದೇಶಿಸಿದೆ.

ಎಂಆರ್‌ಟಿ ಮ್ಯೂಸಿಕ್ ಪಾಲುದಾರ ನವೀನ್ ಕುಮಾರ್ ಅವರು ಈ ಸಂಬಂಧ ದೂರು ನೀಡಿದ್ದರು. “ನ್ಯಾಯ ಎಲ್ಲಿದೆ” ಹಾಗೂ “ಒಮ್ಮೆ ನಿನ್ನನ್ನೂ ಕಣ್ತುಂತ ನೋಡುವಾಸೆ” ಹಾಡುಗಳನ್ನು ಅನುಮತಿ ಇಲ್ಲದೆ ಸಿನಿಮಾದಲ್ಲಿ ಬಳಸಲಾಗಿದೆ ಎಂದು ಅವರು ಆರೋಪಿಸಿದ್ದರು.

ಈ ಕುರಿತು ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 2025ರ ಜನವರಿ 26ರಂದು ಬಿಡುಗಡೆಯಾದ ‘ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲೇ ಈ ಹಾಡುಗಳ ಬಳಕೆ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ರಕ್ಷಿತ್ ಶೆಟ್ಟಿಗೆ ಈ ಹಿಂದೆ ‘ಕಿರಿಕ್ ಪಾರ್ಟಿ’ ಸಿನಿಮಾದಲ್ಲೂ ‘ಶಾಂತಿ ಕ್ರಾಂತಿ’ ಚಿತ್ರದ ಹಾಡನ್ನು ಅನುಮತಿ ಇಲ್ಲದೆ ಬಳಸಿದ ಆರೋಪ ಎದುರಾಗಿತ್ತು.

Advertisement

LEAVE A REPLY

Please enter your comment!
Please enter your name here