Advertisement 

ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಲು ಸರ್ಕಾರವು ಶಿಕ್ಷಕರ ಸೇವೆಯನ್ನು ಸಂಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲು ನಿರ್ಧರಿಸಿದೆ. ಇದರ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲಾ ಹಾಗೂ ಕಾಲೇಜುಗಳಿಗೆ ದಸರಾ ರಜೆಯನ್ನು ಅಕ್ಟೋಬರ್ 18ರವರೆಗೆ ವಿಸ್ತರಿಸಲಾಗಿದೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
Advertisement 

