ಡಿ.8 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

0
25
Advertisement

ಬೆಂಗಳೂರು, ನ.15 : ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನವು ಡಿ.8ರಿಂದ 19ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಸಲು ಸಚಿವ ಸಂಪುಟ ನಿರ್ಧರಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಸಚಿವ ಎಚ್.ಕೆ.ಪಾಟೀಲ್, ʼಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024ರ ವಿವಿಧ ಕಲಂಗಳಿಗೆ ತಿದ್ದುಪಡಿ ತರುವ ಉದ್ದೇಶಹೊಂದಿರುವ ಬೆಂಗಳೂರು ಆಡಳಿತ (ಎರಡನೆ ತಿದ್ದುಪಡಿ) ವಿಧೇಯಕ, 2025ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡಿಸಲು ತೀರ್ಮಾನಿಸಲಾಗಿದೆʼ ಎಂದು ಹೇಳಿದರು.

ಕರ್ನಾಟಕದ ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಯನ್ನು ಪರಿಶೀಲಿಸಲು ಮತ್ತು ಸೂಕ್ತ ಶಿಫಾರಸುಗಳನ್ನು ಮಾಡಲು ಎರಡನೇ ಸಮಿತಿಯನ್ನು ರಚಿಸಲಾಯಿತು. ಮೂರನೇ ಸಮಿತಿಯು ಬೆಂಗಳೂರು-ಮೈಸೂರು ಮೂಲಸೌಕರ್ಯ ಅಭಿವೃದ್ಧಿ ಕಾರಿಡಾರ್‌ನ ಬೆಳವಣಿಗೆಗಳನ್ನು ಪರಿಶೀಲಿಸುವ ಮತ್ತು ಭವಿಷ್ಯದಲ್ಲಿ ತೆಗೆದುಕೊಳ್ಳಬೇಕಾದ ಸೂಕ್ತ ಕ್ರಮಗಳನ್ನು ಪ್ರಾರಂಭಿಸುವ ಕಾರ್ಯವನ್ನು ಹೊಂದಿದೆ ಎಂದರು.

Advertisement

LEAVE A REPLY

Please enter your comment!
Please enter your name here